ಬೆಂಗಳೂರು: “ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ. ನಿಮ್ಮ ರಾಜಕೀಯ ಉದ್ದೇಶದ ಪಾದಯಾತ್ರೆಯನ್ನು ದಯವಿಟ್ಟು ಕೈಬಿಡಿ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, “ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆಗೆ ಸೇರಿದ್ದಾರೆ. ಹಾಗಾಗಿ ಕಾಂಗ್ರೆಸ್ ನಾಯಕರಿಗೆ ಮತ್ತೊಮ್ಮೆ ಮನವಿ ಮಾಡುತ್ತಿದ್ದು, ನಿಮ್ಮ ತೀರ್ಮಾನವನ್ನು ಸಾರ್ವಜನಿಕರ ಆರೋಗ್ಯದ ದೃಷ್ಟಿಯಲ್ಲಿ ಪಾದಯಾತ್ರೆಯನ್ನು ಕೈಬಿಡಿ” ಎಂದಿದ್ದಾರೆ.
“ಕೊರೊನಾ ಸೋಂಕು ಅಪಾಯಕಾರಿ ರೀತಿಯಲ್ಲಿ ಹರಡುತ್ತಿದೆ. ಎಲ್ಲರೂ ಆತಂಕಗೊಂಡಿದ್ದಾರೆ. ನೀವು ಈಗಾಗಲೇ ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು, ಅವರ ಬಳಿ ಕ್ಷಮೆ ಕೇಳಬೇಕಾಗಿದೆ” ಎಂದು ಹೇಳಿದ್ದಾರೆ.
“ಕೈ ನಾಯಕರು ಪಾದಯಾತ್ರೆ ಪ್ರಾರಂಭಿಸಿದಾಗ, ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡ ಪರಿಣಾಮದ ಕುರಿತು ಕಳವಳವಿತ್ತು. ಹಾಗಾಗಿ ನಾವು ಕಾರ್ಯಕ್ರಮವನ್ನು ಮುಂದೂಡಿ ಎಂದು ಮನವಿ ಮಾಡಿಕೊಂಡಿದ್ದೆವು. ಕೊರೊನಾ ಕುರಿತು ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿರುವುದಲ್ಲದೇ ವಿತಂಡ ವಾದ ಮಂಡಿಸುತ್ತಿದ್ದಾರೆ” ಎಂದಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…