Featured

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ – vishwanews24

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ

ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ ತ್ವರಿತ ಅನುಮೋದನೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಪ್ರವೇಶವನ್ನು ಕರ್ನಾಟಕ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕೋರಿದ್ದಾರೆ. ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿರುವ ಅವರು, ಯೋಜನೆಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಮನವಿ ಮಾಡಿದ್ದಾರೆ.

ಗುರುವಾರ ನವದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಅಗತ್ಯವನ್ನು ವಿವರಿಸಿದರು. ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವುದನ್ನು ಉಲ್ಲೇಖಿಸಿದ ಅವರು, ಇದೀಗ ಯೋಜನೆಗೆ ಸಂಬಂಧಿಸಿದ ನಿರ್ಧಾರ ಕೇಂದ್ರ ಸರ್ಕಾರದ ಕೈಯಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ಮುಖ್ಯಮಂತ್ರಿಯವರ ಪ್ರಕಾರ, ಮೇಕೆದಾಟು ಯೋಜನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಜಲ ಆಯೋಗಕ್ಕೆ ಸೇರಿದೆ. ಹೀಗಾಗಿ ಅಗತ್ಯ ಅನುಮೋದನೆ ನೀಡಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿಗೆ ನೀರು, ರಾಜ್ಯಕ್ಕೆ ವಿದ್ಯುತ್ : ಮೇಕೆದಾಟು ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಈ ಜಲಾಶಯ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆ ಹೆಚ್ಚಿಸುವುದರ ಜೊತೆಗೆ ಸುಮಾರು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ಕರ್ನಾಟಕ ಸರ್ಕಾರ ಹೇಳುತ್ತಿದೆ. ಅಲ್ಲದೆ, ತಮಿಳುನಾಡಿಗೆ ಕಾವೇರಿ ನೀರಿನ ಹಂಚಿಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂಬ ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ.

ಇದನ್ನೂ ಓದಿ: 

ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ, ಹಣಕಾಸು ಆಯೋಗದ ಬಾಕಿ ರೂ. 2,860 ಕೋಟಿ ಹಾಗೂ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ರೂ.26,000 ಕೋಟಿ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

33 minutes ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

2 hours ago

ಉಡುಪಿ: ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ – vishwanews24

ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…

2 hours ago

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…

2 hours ago

ಧರ್ಮಸ್ಥಳ ಬುರುಡೆ ಪ್ರಕರಣ : ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ – vishwanews24

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌…

3 hours ago

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ – vishwanews24

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…

4 hours ago