ಮೇಕೆದಾಟು ಯೋಜನೆ : ಕರ್ನಾಟಕದ ಪರ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು – vishwanews24

Featured, ರಾಷ್ಟ್ರ ನ್ಯೂಸ್

ಮೇಕೆದಾಟು ಯೋಜನೆ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು :  ತಮಿಳುನಾಡು ಅರ್ಜಿ ವಜಾ

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಹೊರ ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಯೋಜನೆಗೆ ಮುಂದುವರೆಯಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.

ನ.16ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ – vishwanews24

ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿದ್ದ ಪೀಠ, ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದೆ.

ಈ ಹಂತದಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಿದ ಆದೇಶದ ಪ್ರಕಾರ ಮಾಡಲಾಗುತ್ತಿರುವುದು ಕೇವಲ ವಿಸ್ತೃತ ಯೋಜನಾ ವರದಿ ತಯಾರಿಕೆ ಅಷ್ಟೇ ಆಗಿದೆ. ಅದೂ ತಮಿಳುನಾಡಿನ ಆಕ್ಷೇಪಣೆಗಳನ್ನು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ತಜ್ಞರನ್ನು ಪರಿಗಣಿಸಿದ ನಂತರ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಡಿಪಿಆರ್ ಪರಿಗಣಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳ ಪೂರ್ವಾನುಮೋದನೆಯು ಪೂರ್ವಾಪೇಕ್ಷಿತವಾಗಿರುತ್ತದೆ ಎಂಬುದನ್ನು ಗಮನಿಸಬೇಕು. ಆ ವಿಷಯದ ದೃಷ್ಟಿಯಿಂದ, ಪ್ರಸ್ತುತ ತಮಿಳುನಾಡಿನ ಅರ್ಜಿಯು ಅಪ್ರಸ್ತುತವಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಋತುಚಕ್ರದ ರಜೆ : ರಾಜ್ಯ ಸರಕಾರ ಆದೇಶ – vishwanews24

Leave a Reply