Featured

ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ – Vishwanews24

ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ

ನವದೆಹಲಿ: ಅಮರನಾಥ ಯಾತ್ರೆ ಪುನಾರಂಭಿಸಲಾಗಿದೆ. ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದು, ಇದೀಗ ಹವಾಮಾನ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಯಾತ್ರೆ ಮತ್ತೆ ಆರಂಭಿಸಲಾಗಿದೆ. ಜಮ್ಮು ಮಾರ್ಗವಾಗಿ ಬರುವ ಯಾತ್ರಾರ್ಥಿಗಳಿಗೆ ಬೇಸ್ ಕ್ಯಾಂಪ್‍ಗೆ ತೆರಳಲು ಅನುಮತಿ ನೀಡಲಾಗಿದೆ. ಪೆಹಲ್ಗಾಮ್ ಬೇಸ್ ಮಾರ್ಗವಾಗಿ ತೆರಳಲು ಅವಕಾಶ ನೀಡಲಾಗಿದೆ.

ಮುಂಜಾನೆ 5 ಗಂಟೆಗೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರಾರ್ಥಿಗಳು ಹೊರಟಿದ್ದಾರೆ. ಬಾಲ್ಟಾಲ್ ಮತ್ತು ನುನ್ವಾನ್ ನಿಂದ ಹೆಲಿಕಾಪ್ಟರ್ ಹಾರಾಟ ಆರಂಭವಾಗಿದೆ. ಭಾನುವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸಭೆಯಲ್ಲಿ ಇಂದು ಹವಾಮಾನ ಪರಿಸ್ಥಿತಿ ಆಧರಿಸಿ ಅಧಿಕಾರಿಗಳು ತೀರ್ಮಾನ ಮಾಡುವುದಾಗಿ ತಿಳಿಸಿದ್ದರು.

ಅಮರನಾಥ ಯಾತ್ರೆ ಪುನಾರಂಭಕ್ಕೆ ಜಿಲ್ಲಾಡಳಿತ ಕೂಡ ಉತ್ಸುಕವಾಗಿತ್ತು. ಗುಹೆ ದರ್ಶನಕ್ಕೆ ಸಾವಿರಾರು ಜನರು ಕಾಯುತ್ತಿರುವ ಹಿನ್ನೆಲೆ ಅವಕಾಶ ನೀಡಲು ಚಿಂತನೆ ನಡೆಸಲಾಗಿತ್ತು. ಅಲ್ಲದೆ ಮೇಘಸ್ಫೋಟದಿಂದ ಹಾಳಾದ ರಸ್ತೆಗಳನ್ನು ಜಿಲ್ಲಾಡಳಿತ ಸಿದ್ಧಪಡಿಸಿತ್ತು. ದರ್ಶನಕ್ಕೆ ಮಾಡಿಕೊಂಡಿರುವ ತಯಾರಿಗಳ ಬಗ್ಗೆ ನಿನ್ನೆ ಲೆಫ್ಟಿನೆಂಟ್ ಗವರ್ನರ್ ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಇಂದು ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇತ್ತ ಅಮರನಾಥ ಗುಹೆಯ ಬಳಿ ಮೇಘಸ್ಫೋಟ ಆಗಿ ನಾಪತ್ತೆಯಾದ 40 ಮಂದಿ ಬದುಕಿರುವುದು ಅನುಮಾನವಾಗಿದೆ. ಮೂರು ದಿನದ ಕಾರ್ಯಾಚರಣೆಯ ಬಳಿಕ ಯಾತ್ರಾರ್ಥಿಗಳು ಪತ್ತೆಯಾಗಿಲ್ಲ. ಹೀಗಾಗಿ ನೀರಿನಲ್ಲಿ ಕೊಚ್ಚಿ ಹೋಗಿರಬಹುದು ಎಂದು ರಕ್ಷಣಾ ತಂಡಗಳು ಅನುಮಾನ ವ್ಯಕ್ತಪಡಿಸಿವೆ. ಆದರೂ ಭದ್ರತಾ ಸಿಬ್ಬಂದಿ ಸಾಧ್ಯವಾದಷ್ಟು ಜನರನ್ನು ಜೀವಂತವಾಗಿ ಹುಡುಕುವ ಪ್ರಯತ್ನದಲ್ಲಿದ್ದಾರೆ. ಸ್ನಿಫರ್ ಡಾಗ್‍ಗಳು, ಥರ್ಮಲ್ ಇಮೇಜರ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಹುಡುಕಾಟ ನಡೆಸುತ್ತಿದ್ದಾರೆ.

ಅಮರನಾಥ ಗುಹೆ ಬಳಿ ಮೇಘಸ್ಫೋಟಕ್ಕೂ ಮುನ್ನ ಒಂದು ಲಕ್ಷಕ್ಕೂ ಅಧಿಕ ಯಾತ್ರಾರ್ಥಿಗಳು ದರ್ಶನ ಪಡೆದಿದ್ದರು. ಯಾತ್ರೆ ಶುರುವಾದ ಮೊದಲ ವಾರದಲ್ಲಿ ಒಂದು ಲಕ್ಷ ಮಂದಿ ದರ್ಶನ ಪಡೆದಿದ್ದರು. ಮೇಘಸ್ಫೋಟಕ್ಕೂ ಮುನ್ನ 10 ಬ್ಯಾಚ್‍ಗಳಲ್ಲಿ ಒಟ್ಟು 69,535 ಯಾತ್ರಾರ್ಥಿಗಳು ನುನ್ವಾನ್, ಪಹಲ್ಗಾಮ್, ಬಲ್ಟಾಲ್ ಮೂಲಕ ಭೇಟಿ ನೀಡಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

23 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago