ಮೇ ಎರಡನೇ ವಾರದಲ್ಲಿ ಎಸೆಸೆಲ್ಸಿ ಫಲಿತಾಂಶ ಪ್ರಕಟ – Vishwanews24

Featured, ರಾಜ್ಯ ನ್ಯೂಸ್

ಮೇ ಎರಡನೇ ವಾರದಲ್ಲಿ ಎಸೆಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಆರಂಭವಾಗಿದ್ದು, ಪರೀಕ್ಷಾ ಫ‌ಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.

ಮಾರ್ಚ್‌ 30ರಿಂದ ಎಪ್ರಿಲ್‌ 15ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯಾದ್ಯಾಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಈಗಾಗಲೇ ಮೌಲ್ಯಮಾಪನ ಕಾರ್ಯಕ್ಕೆ ಒಟ್ಟು 73 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ

ಪರೀಕ್ಷಾ ಫ‌ಲಿತಾಂಶ ಸಂಬಂಧ ಶೀಘ್ರ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾಪು : ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಸುವರ್ಣ ಬಿಜೆಪಿ ಸೇರ್ಪಡೆ – Vishwanews24

Leave a Reply