ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸೌಧದ ಸ್ಪೀಕರ್ ಯು. ಟಿ .ಖಾದರ್ ತಿಳಿಸಿದ್ದಾರೆ.
ಈ ಬಗ್ಗೆ ಕರ್ನಾ ಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ಅಕಾಡೆಮಿ ನಿಯೋಗ ಮಂಗಳವಾರ ವಿಧಾನಸೌಧದ ಸ್ಪೀಕರ್ ಯು. ಟಿ .ಖಾದರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.
ಇದನ್ನೂ ಓದಿ : 👇
ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್ ಯು. ಟಿ. ಖಾದರ್ ಅವರು ಶಾಸಕರು ಮತ್ತು ಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವ ಹಾಗೆ ಹೆಸರಾಂತ ಯಕ್ಷಗಾನ ಕಲಾವಿದರನ್ನು ಒಳಗೊಂಡ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್., ಸದಸ್ಯರುಗಳಾದ ಕೊಪ್ಪಲ ಮೋಹನ್ ಕದ್ರಿ, ಸುಧಾಕರ ಶೆಟ್ಟಿ, ಪುಟ್ಟಸ್ವಾಮಿ ಎ. ಆರ್. ಉಪಸ್ಥಿತರಿದ್ದರು.
ಇದನ್ನೂ ಓದಿ : 👇
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…