ಬೆಂಗಳೂರು: ಮೇ ತಿಂಗಳ 10ನೇ ತಾರೀಕು ರಾಜ್ಯದ ವಿಧಾನಸಭೆ ಮತದಾನದ ದಿನ ಮಾತ್ರವಲ್ಲ; ರಾಜ್ಯಕ್ಕೆ ಅಂಟಿಕೊಂಡಿರುವ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಮುಕ್ತಗೊಳ್ಳುವ ಹಾಗೂ ನವ ಕರ್ನಾಟಕಕ್ಕೆ ಹೊಸ ದಿಕ್ಸೂಚಿ ನೀಡುವ ದಿನವೂ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ಲೇಷಿಸಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಅಧಿಕಾರಿ ಸರಕಾರದ ಅಡಿಯಾಳಾಗುವುದಿಲ್ಲ ಎಂಬ ನಂಬಿಕೆ ಇದೆ. ನಾಲ್ಕು ವರ್ಷಗಳಿಂದ ಡಬಲ್ ಎಂಜಿನ್ ಸರಕಾರದ ದಬ್ಟಾಳಿಕೆಗೆ ಜನ ಬೇಸತ್ತಿದ್ದು, ವೈಫಲ್ಯವಾಗಿರುವ ಎಂಜಿನ್ಗಳ ಬದಲಿಗೆ ಹೊಸ ಎಂಜಿನ್ ಅನ್ನು ಜನರೇ ನಿರ್ಮಾಣ ಮಾಡಲಿದ್ದಾರೆ ಎಂದರು.
ನಾವು ಕೇವಲ ರಾಜ್ಯದ ಜನರ ಜತೆಗೆ ಹೊಂದಾಣಿಕೆಯಾಗಿದ್ದೇವೆ ಹೊರತು, ಬೇರೆ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 40 ಪರ್ಸೆಂಟ್ ಕಮಿಷನ್ ಕಾಂಗ್ರೆಸ್ಗೆ ತಿರುಗುಬಾಣವಾಗಲಿದೆ ಎಂದ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 40 ಪರ್ಸೆಂಟ್ ಕಮಿಷನ್ ಎನ್ನುವುದು ಜನರ ಮನಸ್ಸಿನಲ್ಲಿ ಅಚ್ಚೊತ್ತಿದೆ. ಲೋಕಾಯುಕ್ತ ಸಂಸ್ಥೆ ಅದಕ್ಕೆ ಸ್ಟಾಂಪ್ ಒತ್ತಿದ್ದಾರೆ’ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…