Featured

ಮೇ 12 ವಿಜಯ್‌ ಪ್ರಕಾಶ್‌ ಡೇ ಎಂದು ಘೋಷಿಸಿದ ಅಮೆರಿಕಾ ; ಇದು ಕನ್ನಡಿಗರಿಗೊಬ್ಬರಿಗೆ ಸಿಕ್ಕ ಬಹುದೊಡ್ಡ ಸನ್ಮಾನ -Vishwanews24

ಬೆಂಗಳೂರು: ಕನ್ನಡದ ಹೆಮ್ಮೆಯ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಅಮೆರಿಕಾದಲ್ಲಿಯೂ ಗೌರವ ಸಿಕ್ಕಿದೆ.ಅಮೆರಿಕಾದ ನಾರ್ತ್​​ ಕರೋಲಿನಾ ಮೇ 12ನ್ನು ವಿಜಯ್ ಪ್ರಕಾಶ್ ಡೇ ಅಂತಾ ಆಚರಿಸಲಾಗುತ್ತಿದೆ. ಇದು ಕನ್ನಡಿಗರಿಗೊಬ್ಬರಿಗೆ ಸಿಕ್ಕ ಬಹುದೊಡ್ಡ ಸನ್ಮಾನ.

ಕಳೆದ ಮೇ 12ರಂದು ಅಮೆರಿಕದ ಉತ್ತರ ಕರೊಲಿನಾದ ಷಾರ್ಲೆಟ್ ನಗರದಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಹಾಡಿದ ವಿಜಯ್‍ಪ್ರಕಾಶ್ ಅಲ್ಲಿನ ಸಂಗೀತ ಪ್ರೇಮಿಗಳನ್ನು ರಂಜಿಸಿದ್ದರು. ಅಪಾರ ಸಂಖ್ಯೆಯ ಅನಿವಾಸಿ ಭಾರತೀಯರಲ್ಲದೆ ಅಮೆರಿಕನ್ನರೂ ಕೂಡ ಆಗಮಿಸಿದ್ದ ಅಲ್ಲಿನ ಮೇಯರ್ ವಿಲಿಯಮ್ ಸಿ ಡಶ್ ಕೂಡ ಭಾಗವಹಿಸಿದ್ದರು.

ಗಾಯಕ ವಿಜಯ ಪ್ರಕಾಶ್ ಅವರ ಆ ಕಂಠಸಿರಿಗೆ ಮಾರುಹೋದ ಅಲ್ಲಿನ ಚುನಾಯಿತ ಪ್ರತಿನಿಧಿ ವಿಲಿಯಮ್, ವಿಜಯ್ ಪ್ರಕಾಶ್ ಅವರ ಬಗ್ಗೆ ಹಾಗೂ ಅವರ ಸಂಗೀತ ಸಾಧನೆಯ ಬಗ್ಗೆ ತಿಳಿದುಕೊಂಡಿದ್ದಾರೆ.

ಷಾರ್ಲೆಟ್ ನಗರವನ್ನೇ ಸಂಗೀತದ ಅಲೆಯಲ್ಲಿ ತೇಲಿಸಿದ್ದ ವಿಜಯ್ ಪ್ರಕಾಶ್ ಅವರಿಗೆ ಆ ದಿನವನ್ನು ಮೀಸಲಿಡಲು ಸ್ಥಳೀಯ ಆಡಳಿತ ಮಂಡಳಿಯ ಜೊತೆ ಮೇಯರ್ ವಿಲಿಯಂ ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ.

ಇದೀಗ 2019ರ ಮೇ 12 ವಿಜಯ್ ಪ್ರಕಾಶ್ ಡೇ ಎಂದು ಷಾರ್ಲೆಟ್ ನಗರದ ಸರ್ಕಾರಿ ದಾಖಲೆಯಲ್ಲಿ ನಮೂದಿಸಲಾಗಿದೆ. ಪ್ರತಿವರ್ಷ ಈ ದಿನವನ್ನು ವಿಜಯಪ್ರಕಾಶ್ ಡೇ ಎಂದು ಆಚರಿಸಲು ನಾರ್ತ್ ಕರೊಲಿನಾದ ಷಾರ್ಲೆಟ್ ನಗರದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

4 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

4 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

4 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

5 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

5 hours ago