ಕಾಪು : ಕಾಪುವಿನಲ್ಲಿ ವಾರ್ಷಿಕವಾಗಿ ನಡೆಯುವ ಕಾಪುದ ಪಿಲಿಕೋಲ ಈ ಬಾರಿ ಮೇ.14 ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕಾಪುದ ಪಿಲಿಕೋಲಕ್ಕೆ ಪೂರ್ವಭಾವಿಯಾಗಿ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ನಿನ್ನೆ ಪ್ರಾರ್ಥನೆಯೊಂದಿಗೆ ಅಭಯ ಪ್ರಸಾದ ಪಡೆಯಲಾಯಿತು. ಪಿಲಿಕೋಲದ ಸಿದ್ಧತೆಯಲ್ಲಿರುವ ಕಾಪುವಿನ ಶ್ರೀ ಬ್ರಹ್ಮಮುಗ್ಗೆರ್ಕಳ ಹುಲಿಚಂಡಿ ದೈವಸ್ಥಾನದ ಆಡಳಿತ ಮಂಡಳಿ, ಕಾಣಿಕೆ ಮನೆತನದವರು, ಗುರಿಕಾರರು ಮತ್ತು ಹತ್ತು ಸಮಸ್ತರು ಜೊತೆಗೂಡಿ ಮಂಗಳವಾರ ಕಾಪು ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು 3ನೇ ಮಾರಿಗುಡಿಗೆ ತೆರಳಿ ಮಾರಿಯಮ್ಮ ದೇವಿಯ ಬಳಿ ಪ್ರಾರ್ಥನೆ ಸಲ್ಲಿಸಿದರು.
ಈ ಬಗ್ಗೆ ಮಾಹಿತಿ ನೀಡಿರುವ ದೊರೆಕಳಗುತ್ತು ಬಾಲಕೃಷ್ಣ ಶೆಟ್ಟಿ ಅವರು, ಕಾಪುವಿನಲ್ಲಿ ವಾರ್ಷಿಕವಾಗಿ ನಡೆಯುವ ಪಿಲಿಕೋಲವು ಧಾರ್ಮಿಕ ಮತ್ತು ಜನಪದ ಆಚರಣೆಗಳ ಜೀವಂತ ಉದಾಹರಣೆಯಾಗಿದೆ. ಪಿಲಿ ಕೋಲದ ಮೂಲಕವಾಗಿ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ನಂಬಿಕೆ, ನಡವಳಿಕೆ ಸಹಿತವಾಗಿ ಸತ್ಯದ ಅನಾವರಣಗೊಳ್ಳುತ್ತದೆ. ಅದಕ್ಕೆ ಪೂರ್ವದಲ್ಲಿ ಮೂರೂ ಮಾರಿಗುಡಿಗೂ ತೆರಳಿ ಪಿಲಿಕೋಲ ಸುಸೂತ್ರವಾಗಿ ನಡೆಯುವಂತಾಗಲು ಉತ್ತಮ ಪ್ರಸಾದ ನೀಡುವಂತೆ ಪ್ರಾರ್ಥಿಸುವುದಕ್ಕಾಗಿ ಮಾರಿಯಮ್ಮನ ಸನ್ನಿಧಿಗೆ ಆಗಮಿಸಿದ್ದೇವೆ. ಇಲ್ಲಿ ಒಳ್ಳೆಯ ಪ್ರಸಾದ ಸಿಕ್ಕಿದೆ. ಐದು ದಿನಗಳ ಜಾತ್ರೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಡುವುದಾಗಿ ಮಾರಿಯಮ್ಮ ದೇವಿಯ ಅಭಯ ದೊರಕಿದೆ ಎಂದು ತಿಳಿಸಿದ್ದಾರೆ.
ಇತಿಹಾಸ ಪ್ರಸಿದ್ಧವಾಗಿರುವ ಕಾಪುವಿನ ಪಿಲಿಕೋಲದಲ್ಲಿ ಭೂತ ನರ್ತಕ (ಪಿಲಿ ವೇಷಧಾರಿ) ಯಾರು ಎನ್ನುವುದು ಹಳೇ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ನಿರ್ಧಾರವಾಗುತ್ತದೆ. ಪಿಲಿಕೋಲ ನಡೆಯುವ ಮುಂಚಿನ ಮಂಗಳವಾರ ಮೂರೂ ಮಾರಿಗುಡಿಗಳಿಗೆ ತೆರಳಿ ಮಾರಿಯಮ್ಮನ ಅಭಯ ಪಡೆಯುವ ಸಂಪ್ರದಾಯವಿದೆ. ಮೂರೂ ಮಾರಿಗುಡಿಗಳಲ್ಲೂ ಪ್ರಾರ್ಥನೆ ಸಲ್ಲಿಸಿದ ಬಳಿಕ, ಪಿಲಿ ಭೂತದ ನರ್ತಕನಿಗೆ ಮಾರಿಯಮ್ಮ ದೇವಿಯ ದರ್ಶನ ಪಾತ್ರಿಯು ಪಿಲಿ ಕೋಲ ಸುಸೂತ್ರವಾಗಿ ನಡೆಯಲಿ ಎಂಬ ಅಭಯ ಪ್ರಸಾದವನ್ನು ನೀಡಿ, ಸಂಪ್ರದಾಯ ಬದ್ಧವಾಗಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಲಾಗುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…