ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ(ಮೇ.2 ರಂದು) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ https://karresults.nic.in/ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…