Featured

ಮೇ 2 ರಂದು ಎಸ್.ಸಿ.ಡಿ.ಸಿ.ಸಿ‌ ಬ್ಯಾಂಕಿನ ನೂತನ ಮಣಿಪಾಲ ಶಾಖೆ ಉದ್ಘಾಟನೆ ಹಾಗೂ ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ: ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಪು ದೇವಿಪ್ರಸಾದ್ ಶೆಟ್ಟಿ – vishwanews24

ಮೇ 2 ರಂದು ಎಸ್.ಸಿ.ಡಿ.ಸಿ.ಸಿ‌ ಬ್ಯಾಂಕಿನ ನೂತನ ಮಣಿಪಾಲ ಶಾಖೆ ಉದ್ಘಾಟನೆ ಹಾಗೂ ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ: ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಪು ದೇವಿಪ್ರಸಾದ್ ಶೆಟ್ಟಿ – vishwanews24

ಉಡುಪಿ:  ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಣನೀಯ ಪ್ರಗತಿಯನ್ನು ಕಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 108 ವರ್ಷಗಳ ಇತಿಹಾಸವನ್ನು ಹೊಂದಿದೆ. 1914ರಲ್ಲಿ ಪುತ್ತೂರಿನಲ್ಲಿ ದಿವಂಗತ ಮೊಳಹಳ್ಳಿ ಶಿವರಾವ್ ಅವರ ಮಾರ್ಗದರ್ಶನದಲ್ಲಿ ಸ್ಥಾಪನೆಯಾದ ಈ ಬ್ಯಾಂಕ್ 110 ಶಾಖೆಗಳನ್ನು ಹೊಂದಿದೆ. ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಅವರ ಸಮರ್ಥ ಅಧ್ಯಕ್ಷತೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಯತ್ತ ಸಾಗುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಇದೀಗ ತನ್ನ 11ನೇ ನೂತನ ಶಾಖೆಯು ಮಣಿಪಾಲದಲ್ಲಿ ಮೇ ತಿಂಗಳ 2ನೇ ತಾರೀಕಿನಂದು ಪೂರ್ವಾಹ್ನ 10.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ನೆಲ ಅಂತಸ್ತುನಲ್ಲಿ ಕಾರ್ಯಾರಂಭಗೊಳ್ಳುವ ಈ ನೂತನ ಶಾಖೆಯು ಸಂಪೂರ್ಣ ಗಣಕೀಕೃತಗೊಂಡ ಹವಾನಿಯಂತ್ರಿತ ಶಾಖೆಯಾಗಿದೆ. ಆರ್‌ಟಿಜಿಎಸ್, ನೆಫ್ಟ್ ರೂಪೇ ಕಾರ್ಡ್ (ಎಟಿಎಂ) ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ಮಣಿಪಾಲ ನೂತನ ಶಾಖೆಯು ಕಾರ್ಯಾರಂಭಗೊಳ್ಳಲಿದೆ ಬ್ಯಾಂಕಿನ ನಿರ್ದೇಶಕ ಡಾ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.


ಉಡುಪಿ ಜಿಲ್ಲೆಗೆ ಮೊಬೈಲ್ ಬ್ಯಾಂಕ್:
ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ “ಗ್ರಾಹಕರ ಮನೆಬಾಗಿಲಗ ಬ್ಯಾಂಕ್” ಎಂಬ ವಿನೂತನ ಮೊಬೈಲ್ ಬ್ಯಾಂಕಿಂಗ್ ಯೋಜನೆಯನ್ನು 2007ರ ಡಿಸೆಂಬರ್ 19ರಂದು ಜಾರಿಗೆ ತಂದಿದೆ. ಸುಸಜ್ಜಿತ ವಾಹನದ ಮೂಲಕ ನಿರ್ದಿಷ್ಟ ದಿನಗಳಲ್ಲ. ನಿರ್ದಿಷ್ಟ ಸಮಯದಲ್ಲ. ನಿರ್ದಿಷ್ಟ ಸ್ಥಳಗಳಲ್ಲ ಬ್ಯಾಂಕಿಂಗ್ ವ್ಯವಹಾರ ನಡೆಯುತ್ತಿದ್ದು, ಇದು ಮಂಗಳೂರಿಗೆ ಮಾತ್ರ ಸೀಮಿತವಾಗಿತ್ತು. ಇದೀಗ ಉಡುಪಿ ಜಿಲ್ಲೆಗೂ ಈ ಯೋಜನೆಯನ್ನು ವಿಸ್ತರಿಸಲಿದ್ದು, ಇದರ ಉದ್ಘಾಟನೆಯೂ ಕೂಡಾ ಮೇ – 2ರಂದು ನಡೆಯಲಿದೆ.

ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ:
ಎಸ್‌ಸಿಡಿಸಿಸಿ ಬ್ಯಾಂಕ್ ಪ್ರವರ್ತಿತ ನವೋದಯ ಸ್ವಸಹಾಯ ಸಂಘಗಳು ಸಂಘಟನಾತ್ಮಕವಾಗಿ ಬಲಾಡ್ಯಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶವನ್ನು ಕೂಡಾ ಮೇ-2ರಂದು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶ ಎಂ.ಐ.ಟಿ. ಕಾಲೇಜು ಎದುರುಗಡೆಯ ಮೈದಾನ, ಮಣಿಪಾಲ ಇಲ್ಲ. ನಡೆಯಲಿದೆ. ಬಡಜನರ ಪರಿಪೂರ್ಣ ಬದುಕಿಗೆ ನವೋದಯ ಸ್ವಸಹಾಯ ಸಂಘಗಳು ಆಶಾಕಿರಣವಾಗಿರುವ ಈ ಕಾಲಘಟ್ಟದಲ್ಲಿ ಇನ್ನೂ ಹೆಚ್ಚಿನ ಭರವಸೆಯನ್ನು ಮೂಡಿಸುವ ಉದ್ದೇಶದಿಂದ ಸಾಧನಾ ಸಮಾವೇಶ ನಡೆಯಲಿದೆ.

ಗಣ್ಯರಿಂದ ಉದ್ಘಾಟನೆ :
ಎಸ್‌ಸಿಡಿಸಿಸಿ ಬ್ಯಾಂಕಿನ 11ನೇ ನೂತನ ಮಣಿಪಾಲ ಶಾಖೆಯನ್ನು ಕೇಂದ್ರ ಸರಕಾರದ ಮಾನ್ಯ ಕೃಷಿ ಮತ್ತು ರೈತರ ಕಲ್ಯಾಣ ಇಲಾಖಾ ರಾಜ್ಯ ಸಚಿವೆ ಸನ್ಮಾನ್ಯ ಶೋಭಾ ಕರಂದ್ಲಾಜೆಯವರು ಉದ್ಘಾಟಿಸದಿರುವರು. ಕರ್ನಾಟಕ ಸರಕಾರದ ಮಾನ್ಯ ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಎಸ್.ಟಿ, ಸೋಮಶೇಖರ್ ಅವರು ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶದ ಉದ್ಘಾಟನೆ ನೆರವೇರಿಸಲಿರುವರು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರು ಹಾಗೂ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವರು. ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ವಿ. ಸುನಿಲ್ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡಲಿರುವರು. ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ನವೋದಯ ಜಂಟಿ ಭಾದ್ಯತಾ ಗುಂಪುಗಳಿಗೆ ಸಾಲ ಪತ್ರ ವಿತರಣೆ ನೆರವೇರಿಸಲಿರುವರು. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಇದರ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬೆಳ್ಳ ಪ್ರಕಾಶ್ ಅವರು ಹೊಸ ಸ್ವಸಹಾಯ ಗುಂಪುಗಳ ಉದ್ಘಾಟನೆ ನೆರವೇರಿಸಲಿರುವರು. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್), ಬೆಂಗಳೂರು ಇದರ ಮಹಾಪ್ರಬಂಧಕರಾದ ಸನ್ಮಾನ್ಯ ಶ್ರೀ ಸೀರಜ್ ಕುಮಾರ್ ವರ್ಮ ಅವರು ಉಡುಪಿ ಮೊಬೈಲ್ ಬ್ಯಾಂಕ್ ಉದ್ಘಾಟನೆ ಮಾಡಲಿರುವರು. ಶಾಖೆಯ ಭದ್ರತಾ ಕೋಶದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಸನ್ಮಾನ್ಯ ಶ್ರೀ ಕೆ. ರಘುಪತಿ ಭಟ್ ನೆರವೇರಿಸಲಿರುವರು.

ನೂತನ ಶಾಖೆಯ ಗಣಕೀಕರಣದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಯೋಜನಾ ಆಯೋಗದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಕ. ಜಯಪ್ರಕಾಶ್ ಹೆಗ್ಡೆ: ಲಾಕರ್‌ ಕೀ ಹಸ್ತಾಂತರವನ್ನು ಉಡುಪಿಯ ಉದ್ಯಮಿಯಾದ ಸನ್ಮಾನ್ಯ ಶ್ರೀ ನಾಡೋಜ ಡಾ| ಜಿ. ಶಂಕರ್ ಇವರು ನೆರವೇರಿಸಲಿರುವರು. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸನ್ಮಾನ್ಯ ಶ್ರೀ ಸಿ.ಎನ್. ದೇವರಾಜ್ ಅವರು ಚೈತನ್ಯ ವಿಮಾ ಚೆಕ್ ವಿತರಣೆ ನೆರವೇರಿಸಅರುವರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಇದರ ನಿರ್ದೇಶಕರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆ, ಇದರ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಇದರ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ, ಸುವರ್ಣ ದಿ ಕೆನರಾ ಲ್ಯಾಂಡ್ ಇನ್‌ವೆಸ್ಟ್‌ಮೆಂಟ್ಸ್ ಅ.. ಮಣಿಪಾಲ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಟಿ. ಅಶೋಕ್ ಪೈ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಇದರ ಅಧ್ಯಕ್ಷರಾದ ಶ್ರೀ ದಿನಕರ್ ಶೆಟ್ಟಿ ಹೆರ್ಗ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ ನಾಯಕ್, ಉಜ್ವಲ್ ಡೆವಲಪರ್, ಉಡುಪಿ ಇದರ ಶ್ರೀ ಪುರುಷೋತ್ತಮ
ಶೆಟ್ಟಿ ಇವರು ಸಮಾರಂಭದಲ್ಲಿ ಗೌರವ ಉಪಸ್ಥಿತಿ ಇರುವರು. ಎಂದು ಅವರು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ‌ ಸಂಧರ್ಭದಲ್ಲಿ ರಾಜ್ಯ ಸಹಕಾರ ಮಹಾಮಂಡಳದ ನಿರ್ದೆಶಕ – ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಎಸ್ ಸಿ ಡಿ ಸಿ‌ ಸಿ ಬ್ಯಾಂಕಿನ ನಿರ್ದೇಶಕರಾದ ಪಾಂಗಾಳ ರಾಜೇಶ್ ರಾವ್, ರಾಜು ಪೂಜಾರಿ ಬೈಂದೂರು,  ಮಹೇಶ್ ಹೆಗ್ಡೆ ಮೊಳಹಳ್ಳಿ,ಅಶೋಕ್ ಶೆಟ್ಟಿ ಕುಕ್ಕೆಹಳ್ಳಿ,ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

5 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

5 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

12 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

13 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

13 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago