Featured

ಮೇ 21ರಿಂದ 23ರವರೆಗೆ ವ್ಯಾಪಕ ಮಳೆ : ದ.ಕ ಜಿಲ್ಲೆಯಲ್ಲಿ ಆರೆಂಜ್- ರೆಡ್‌ ಅಲರ್ಟ್‌ : ಹವಾಮಾನ ಇಲಾಖೆ – vishwanews24

ಮೇ 21ರಿಂದ 23ರವರೆಗೆ ವ್ಯಾಪಕ ಮಳೆ : ದ.ಕ ಜಿಲ್ಲೆಯಲ್ಲಿ ಆರೆಂಜ್- ರೆಡ್‌ ಅಲರ್ಟ್‌ : ಹವಾಮಾನ ಇಲಾಖೆ

ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಮೇ 21- ಮೇ 23ರವರೆಗೆ ಆರೆಂಜ್ ಮತ್ತು ರೆಡ್‌ ಅಲರ್ಟ್‌ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.

ಮುಂಜಾಗೃತಾ ಕ್ರಮದ ಬಗ್ಗೆ ಸೂಚನೆ ನೀಡಿರುವ ಪ್ರಾಧಿಕಾರವೂ, ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಜಾಗೃತೆ ವಹಿಸಬೇಕು ಎಂದು ಎಚ್ಚರಿಕೆ ನೀಡಿದೆ.

ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಜಿಲ್ಲಾಡಳಿತದಿಂದ ನೇಮಕ ಮಾಡಲಾದ ಇನ್ಸಿಡೆಂಟ್ ಕಮಾಂಡರ್‌ಗಳು ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಿದೆ.

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರುವಂತೆ ಹಾಗೂ ಪ್ರವಾಸಿಗರು, ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ಧ ಸ್ಥಿತಿಯಲ್ಲಿರಲು ನಿರ್ದೇಶನ ನೀಡಲಾಗಿದೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago