ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಬಯೋಪಿಕ್ ‘ಪಿಎಂ ನರೇಂದ್ರ ಮೋದಿ’ ಚಿತ್ರ ಮೇ 24ರಂದು ಬಿಡುಗಡೆಯಾಗಲಿದೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 11ರಂದೇ ಬಿಡುಗಡೆಯಾಗಬೇಕಿದ್ದ ಸಿನಿಮಾ ಹಲವು ವಾದ-ವಿವಾದಗಳ ಬಳಿಕ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೇ 24ರಂದು ಬಿಡುಗಡೆಯಾಗಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚಿತ್ರದ ನಿರ್ಮಾಪಕ ಸಂದೀಪ್ ಸಿಂಗ್, “ಎಲ್ಲ ರೀತಿಯ ತೊಂದರೆಗಳನ್ನು ಎದುರಿಸಿ ಮತ್ತೆ ಮುನ್ನುಗ್ಗಲಿದ್ದೇವೆ. ಮೇ 24 ರಂದು ‘ಪಿಎಂ ನರೇಂದ್ರ ಮೋದಿ ಚಿತ್ರ ಬಿಡುಗಡೆಯಾಗಲಿದೆ” ಎಂದಿದ್ದಾರೆ. ಪ್ರಧಾನಿ ಮೋದಿ ಅವರ ಜೀವನಾಧಾರಿತ ಚಿತ್ರ 70ಎಂಎಂ ಪರದೆಯ ಮೇಲೆ ಪ್ರದರ್ಶನಗೊಳ್ಳಲಿದೆ.
ಬಾಲಿವುಡ್ ನಟ ವಿವೇಕ್ ಒಬೆರಾಯ್ ಈ ಚಿತ್ರದಲ್ಲಿ ಮೋದಿ ಅವರ ಪಾತ್ರದಲ್ಲಿ ಅಭಿನಯಿಸಿದ್ದು, 9 ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ನೈಜ ಜೀವನದ ಚಿತ್ರ ಕಥೆಯಿರುವ ಸಿನಿಮಾ ಪಾತ್ರಧಾರಿಯಾಗಿ ವಿವೇಕ್ ನಟಿಸುತ್ತಿದ್ದಾರೆ. ಉಳಿದಂತೆ ಬೋಮನ್ ಇರಾನಿ, ಮನೋಜ್ ಜೋಶಿ, ಪ್ರಶಾಂತ್ ನಾರಾಯಣನ್, ಬರ್ಖಾ ಬಿಸ್ಟ್, ರಾಜೇಂದ್ರ ಗುಪ್ತಾ, ಝರಿನಾ ವಹಾಬ್ ಸೇರಿದಂತೆ ಇತರರು ತಾರಾಗಣದಲ್ಲಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…