Featured

ಮೇ 24ರಂದು ಪ್ರಧಾನಿ ಮೋದಿ ಜೀವನಾಧಾರಿತ ‘ಬಯೋಪಿಕ್​ ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಬಯೋಪಿಕ್​ ‘ಪಿಎಂ ನರೇಂದ್ರ ಮೋದಿ’ ಚಿತ್ರ ಮೇ 24ರಂದು ಬಿಡುಗಡೆಯಾಗಲಿದೆ.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 11ರಂದೇ ಬಿಡುಗಡೆಯಾಗಬೇಕಿದ್ದ ಸಿನಿಮಾ ಹಲವು ವಾದ-ವಿವಾದಗಳ ಬಳಿಕ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೇ 24ರಂದು ಬಿಡುಗಡೆಯಾಗಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಚಿತ್ರದ ನಿರ್ಮಾಪಕ ಸಂದೀಪ್ ಸಿಂಗ್, “ಎಲ್ಲ ರೀತಿಯ ತೊಂದರೆಗಳನ್ನು ಎದುರಿಸಿ ಮತ್ತೆ ಮುನ್ನುಗ್ಗಲಿದ್ದೇವೆ. ಮೇ 24 ರಂದು ‘ಪಿಎಂ ನರೇಂದ್ರ ಮೋದಿ ಚಿತ್ರ ಬಿಡುಗಡೆಯಾಗಲಿದೆ” ಎಂದಿದ್ದಾರೆ. ಪ್ರಧಾನಿ ಮೋದಿ ಅವರ ಜೀವನಾಧಾರಿತ ಚಿತ್ರ 70ಎಂಎಂ ಪರದೆಯ ಮೇಲೆ ಪ್ರದರ್ಶನಗೊಳ್ಳಲಿದೆ.

ಬಾಲಿವುಡ್ ನಟ ವಿವೇಕ್ ಒಬೆರಾಯ್ ಈ ಚಿತ್ರದಲ್ಲಿ ಮೋದಿ ಅವರ ಪಾತ್ರದಲ್ಲಿ ಅಭಿನಯಿಸಿದ್ದು, 9 ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ನೈಜ ಜೀವನದ ಚಿತ್ರ ಕಥೆಯಿರುವ ಸಿನಿಮಾ ಪಾತ್ರಧಾರಿಯಾಗಿ ವಿವೇಕ್ ನಟಿಸುತ್ತಿದ್ದಾರೆ. ಉಳಿದಂತೆ ಬೋಮನ್ ಇರಾನಿ, ಮನೋಜ್ ಜೋಶಿ, ಪ್ರಶಾಂತ್ ನಾರಾಯಣನ್, ಬರ್ಖಾ ಬಿಸ್ಟ್, ರಾಜೇಂದ್ರ ಗುಪ್ತಾ, ಝರಿನಾ ವಹಾಬ್ ಸೇರಿದಂತೆ ಇತರರು ತಾರಾಗಣದಲ್ಲಿದ್ದಾರೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

11 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

12 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

12 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago