ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ನೂತನ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಬೈಂದೂರು ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸುವ ಜೊತೆಗೆ ಸಮಸ್ತ ಕಾರ್ಯಕರ್ತ ಬಂಧುಗಳು ಹಾಗೂ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವ ‘ಅಭಿನಂದನಾ ಸಮಾರಂಭ’ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತ ಬಂಧುಗಳು, ಜನಪ್ರತಿನಿಧಿಗಳು ಮತ್ತು ಪಕ್ಷದ ಹಿತೈಷಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…