Featured

ಮೇ 25 ರಂದು ಗ್ರಾ. ಪಂ. ಉಪ ಚುನಾವಣೆ :  ಉದ್ಯಾವರ, ಪಡುಬಿದ್ರಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24

ಮೇ 25 ರಂದು ಗ್ರಾ. ಪಂ. ಉಪ ಚುನಾವಣೆ :  ಉದ್ಯಾವರ, ಪಡುಬಿದ್ರಿಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ : ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಗ್ರಾಮ ಪಂಚಾಯತಿಯ -1 ಹಾಗೂ ಕಾಪು ತಾಲೂಕಿನ ಪಡುಬಿದ್ರೆ ಗ್ರಾಮ ಪಂಚಾಯತಿಯ -1 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶಿಸಿದ್ದು, ಅದರಂತೆ ಮೇ 25 ರಂದು ಉಪಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮೇ 25 ರಂದು ಬೆಳಗ್ಗೆ 6 ಗಂಟೆಯಿ0ದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಚುನಾವಣೆ ನಡೆಯಲಿರುವ ಮೇಲ್ಕಂಡ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿನ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಸದರಿ ಅವಧಿಯಲ್ಲಿ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. 

   ಮತಗಟ್ಟೆ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿರುತ್ತದೆ. ಶಸ್ತ್ರ, ಬಡಿಕೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿರುತ್ತದೆ. 

   ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯೊಳಗೆ ಚುನಾವಣೆ ಪ್ರಚಾರ ನಿಷೇದಿಸಲಾಗಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ಮತ್ತು ಕಲ್ಲುಗಳನ್ನು ಹಾಗೂ ಎಸೆಯುವಂತಹ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

   ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ / ದಹನ ಮಾಡುವುದನ್ನು ನಿರ್ಬಂಧಿಸಲಾಗಿದೆ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿರುತ್ತದೆ. 

   ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿರುತ್ತದೆ.

   ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

6 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

15 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

15 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

15 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

15 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago