ಮೇ.29 ರಂದು ಬಂಟಕಲ್ ಇಂಜಿನಿಯರಿ0ಗ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ – Vishwanews24

Featured, ಉಡುಪಿ

ಮೇ.29 ರಂದು ಬಂಟಕಲ್ ಇಂಜಿನಿಯರಿ0ಗ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಬ0ಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಹನ್ನೆರಡನೆಯ ವರ್ಷದ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 29
ಮೇ2022 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಶ್ರೀ ಸುಬ್ರಮಣ್ಯ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ವಾರ್ಷಿಕೋತ್ಸವ ಸಮಾರಂಭದ ಸಭಾ
ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾII ಆರ್ ಗುರುರಾಜನ್
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ. ಸಿಎ ಎ ರಾಘವೇಂದ್ರರಾವ್, ಕುಲಾಧಿಪತಿಗಳು, ಶ್ರೀನಿವಾಸ ವಿಶ್ವವಿದ್ಯಾಲಯ, ಮಂಗಳೂರು ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಸಭಾ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸೋದೆ ವಾದಿರಾಜ ಮಠದ ದಿವಾನರಾದ ಶ್ರೀ ಶ್ರೀನಿವಾಸ ತಂತ್ರಿ, ಸೋದೆ
ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್
ಮತ್ತು ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್ ಉಪಸ್ಥಿತರಿರಲಿದ್ದಾರೆ. ಇದೇ ದಿನ ಪೂರ್ವಾಹ್ನ ಕಾಲೇಜಿನ ಹಳೆ ವಿದ್ಯಾರ್ಥಿಗಳ
ಸಮಾವೇಶ ಜರುಗಲಿದೆ. ಸಂಜೆ 7ಗಂಟೆಗೆ ದೇಶದ ಪ್ರತಿಷ್ಟಿತ ಮ್ಯುಸಿಕಲ್ ಬ್ಯಾಂಡ್ ಸಂಸ್ಥೆಯಾದ ‘ಮಸಾಲ ಕಾಫಿ’ತಂಡದವರಿ0ದ ಸಂಗೀತ
ರಸಮAಜರಿ ಮನೋರಂಜನಾ ಕಾರ್ಯಕ್ರಮ ಜರಗಲಿದೆ.

ಬಂಟ್ವಾಳ : ಅಂತರಾಷ್ಟ್ರೀಯ ಕಬ್ಬಡಿ ಆಟಗಾರ , ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ನಿಧನ – Vishwnaews24

Leave a Reply