ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ ಅವರು ಬೆಂಗಳೂರಿಗೆ ಬಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ (SIT) ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆ ಕೇಳಿದ್ದಾರೆ.
ಹೇಳಿಕೆಯಲ್ಲಿ ಏನಿದೆ?
ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು. ವಿದೇಶಕ್ಕೆ ಹೋಗುವಾಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್ ನ್ಯೂಸ್ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಬಂದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಎಸ್‌ಐಟಿ ನೋಟಿಸ್ ನೀಡಿದ ವಿಚಾರ ಗೊತ್ತಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ.
ನನ್ನ ಮೇಲೆ ರಾಜಕೀಯ ಪಿತೂರಿ ಮಾಡಲಾಗಿದೆ. ಚುನಾವಣೆ ಸಮಯದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಆರೋಪದಿಂದ ನಾನು ಮಾನಸಿಕ ಖಿನ್ನತೆಗೆ ಜಾರಿದ್ದೆ. ಈ ಖಿನ್ನತೆಯಿಂದ ಹೊರ ಬರದಲು ಕೆಲ ಸಮಯ ಬೇಕಿತ್ತು. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ಈ ಸುಳ್ಳು ಪ್ರಕರಣದಿಂದ ನಾನು ಹೊರ ಬರುತ್ತೇನೆ. ಬಂದ ಮೇಲೆ ಎಲ್ಲರಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…