Featured

ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಗೃಹ ಸಚಿವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ ಮಹಿಳೆ – vishwanews24

ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಗೃಹ ಸಚಿವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ ಮಹಿಳೆ

ರಾಯಚೂರು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಬೇಸತ್ತು ಶರಣಬಸವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಯಚೂರು ಜಿಲ್ಲೆಯ ಕಪಗಲ್ ಗ್ರಾಮದಲ್ಲಿ ನಡೆದಿದೆ. ಮನೆಗೆ ಆಸರೆಯಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬ ಹೋರಾಟಕ್ಕೆ ಮುಂದಾಗಿದೆ. ಪತಿ ಸಾವಿನಿಂದ ಕಣ್ಣೀರಲ್ಲಿ ಕೈತೊಳೆಯುತ್ತಿರುವ ಮೃತನ ಪತ್ನಿ ಪಾರ್ವತಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮಾಂಗಲ್ಯ ಸರ ಹಾಗೂ ಮನವಿ ಪತ್ರವನ್ನು ಸ್ಪೀಡ್ ಪೋಸ್ಟ್ ಮಾಡಿದ್ದಾರೆ.

ಮೇಸ್ತ್ರಿ ಕೆಲಸ ಜೊತೆಗೆ ಟಂಟಂ ಚಾಲಕರಾಗಿದ್ದ ಶರಣಬಸವ, ವಿವಿಧ ಫೈನಾನ್ಸ್‌ಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಆದರೆ ಅವುಗಳ ಟಾರ್ಚರ್ ತಾಳದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮನೆಗೆ ಆಧಾರವಾಗಿದ್ದ ಪತಿಯನ್ನು ಕಳೆದುಕೊಂಡಿರುವುದರಿಂದ ಪರಿಹಾರಕ್ಕೆ ಮನೆಯವರು ಮನವಿ ಮಾಡಿದ್ದಾರೆ. ಸಾಲ ವಸೂಲಿಗಾಗಿ ಕಿರುಕುಳ ಕೊಡುವ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಲ ತೀರಿಸಲು ಸಮಯಾವಕಾಶವನ್ನೂ ಕೊಡದೆ ಮನೆ ಬಾಗಿಲು ಬಡಿಯುತ್ತಿರುವುದಕ್ಕೆ ಬಡ ಜನರು ಕಂಗಾಲಾಗಿದ್ದಾರೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

8 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

11 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

14 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

15 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

15 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

15 hours ago