ಬೆಂಗಳೂರು:ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಬಿದ್ದಿದೆ. ಮೈಕ್ರೋ ಫೈನಾನ್ಸ್ ಮತ್ತು ಹಣವನ್ನು ಸಾಲವಾಗಿ ನೀಡುವ ಕಂಪನಿಗಳಿಗೆ ಕಾನೂನು ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್, ಅಸೋಸಿಯೇಷನ್ ಪದಾಧಿಕಾರಿಗಳು, ಆರ್‌ಬಿಐ ಅಧಿಕಾರಿಗಳು, ನಬಾರ್ಡ್ ಅಧಿಕಾರಿಗಳ ಜೊತೆ ಸಹಕಾರ, ಕಂದಾಯ, ಗೃಹ, ಕಾನೂನು, ಹಣಕಾಸು ಇಲಾಖೆ ಸಭೆ ಮಾಡಿದ ನಂತರ ಸರ್ಕಾರ ಕೈಗೊಂಡ ನಿರ್ಧಾರಗಳನ್ನು ಸಿದ್ದರಾಮಯ್ಯ ತಿಳಿಸಿದರು.
ಸದ್ಯ ಸಭೆಯಲ್ಲಿ ಏನು ಕ್ರಮಕೈಗೊಳ್ಳಲಾಗಿದೆ ಎಂಬ ಮಾಹಿತಿ ಇಲ್ಲಿದೆ.
ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು.
ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ಮಾಡಲಾಗುವುದು. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.
ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು.
ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ.
Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
ಸಾಲ ವಸೂಲಾತಿ ಕುರಿತಾಗಿ ಆರ್ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ. ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್ ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…