Featured

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಅಂಕುಶ – ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು : ಸಿಎಂ ಸಿದ್ದರಾಮಯ್ಯ – vishwanews24

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಅಂಕುಶ – ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು : ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಅಂಕುಶ‌ ಬಿದ್ದಿದೆ. ಮೈಕ್ರೋ ಫೈನಾನ್ಸ್ ಮತ್ತು ಹಣವನ್ನು ಸಾಲವಾಗಿ ನೀಡುವ ಕಂಪನಿಗಳಿಗೆ ಕಾನೂನು ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್‌, ಅಸೋಸಿಯೇಷನ್ ಪದಾಧಿಕಾರಿಗಳು, ಆರ್‌ಬಿಐ ಅಧಿಕಾರಿಗಳು, ನಬಾರ್ಡ್ ಅಧಿಕಾರಿಗಳ ಜೊತೆ ಸಹಕಾರ, ಕಂದಾಯ, ಗೃಹ, ಕಾನೂನು, ಹಣಕಾಸು ಇಲಾಖೆ ಸಭೆ ಮಾಡಿದ ನಂತರ ಸರ್ಕಾರ ಕೈಗೊಂಡ ನಿರ್ಧಾರಗಳನ್ನು ಸಿದ್ದರಾಮಯ್ಯ ತಿಳಿಸಿದರು.

ಸದ್ಯ ಸಭೆಯಲ್ಲಿ ಏನು ಕ್ರಮಕೈಗೊಳ್ಳಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು.

ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ಮಾಡಲಾಗುವುದು. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.

ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು.

ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ.

Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

ಸಾಲ ವಸೂಲಾತಿ ಕುರಿತಾಗಿ ಆರ್‌ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ. ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್‌ ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago