Featured

ಮೈಕ್ರೋ ಫೈನಾನ್ಸ್  ಕಿರುಕುಳ : ನಾಳೆಯ ಕ್ಯಾಬಿನೆಟ್‌ನಲ್ಲಿ  ಸುಗ್ರೀವಾಜ್ಞೆ  ಮೂಲಕ ಹೊಸ ಕಾನೂನು ಜಾರಿಗೆ : ಪರಮೇಶ್ವರ್ – vishwanews24

ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ನಾಳೆ ಸುಗ್ರೀವಾಜ್ಞೆ ಮೂಲಕ ಹೊಸ  ಕಾನೂನು ಜಾರಿಗೆ : ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಹೊಸ ಕಾನೂನು ನಾಳೆಯ ಕ್ಯಾಬಿನೆಟ್‌ನಲ್ಲಿ ತರಲಿದ್ದು, ಸುಗ್ರೀವಾಜ್ಞೆ  ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ.

ಸಿಎಂ ಸಭೆ ಮಾಡಿದ ಮೇಲೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು. ಆಗ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಮೊನ್ನೆ ಸಿಎಂ ಸಭೆಯಲ್ಲಿ ಪೊಲೀಸರು ಇಂತಹ ಕೇಸ್ ಬಗ್ಗೆ ಸುಮೋಟೋ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದೇವೆ. ಇವತ್ತು ಮೈಕ್ರೋ ಫೈನಾನ್ಸ್ ಕಾನೂನು ಮಾಡುವ ಬಗ್ಗೆ ಸಭೆ ಕರೆದಿದ್ದೇವೆ. ಇವತ್ತು ಬಿಲ್ ಬಗ್ಗೆ ನಾನು, ಕಾನೂನು ಸಚಿವರು, ಕಂದಾಯ ಸಚಿವರು ಸಭೆ ಮಾಡಿ ಬಿಲ್ ಅಂತಿಮ ಮಾಡುತ್ತೇವೆ. ನಾಳೆಯ ಕ್ಯಾಬಿನೆಟ್ ನಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಕ್ರಮ ತೆಗೆದುಕೊಂಡು ರಾಜ್ಯಪಾಲರಿಗೆ ಕಳಿಸ್ತೀವಿ ಅಂತ ತಿಳಿಸಿದರು.

ಈಗಾಗಲೇ SP-DCಗಳ ಸಭೆ ಮಾಡಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಸಹಾಯವಾಣಿ ಕೂಡಾ ಪ್ರಾರಂಭ ಮಾಡಿದ್ದೇವೆ. ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಡುವುದು ಮತ್ತು ಇದಕ್ಕಾಗಿ ಒಂದು ಪ್ರತ್ಯೇಕ ವಿಂಗ್ ಪ್ರಾರಂಭ ಮಾಡೋದು ಬಿಲ್ ನಲ್ಲಿ ಅಂಶಗಳನ್ನ ಸೇರಿಸಿದ್ದೇವೆ ಎಂದರು.

ಕೆಲವು ಮೈಕ್ರೋ ಫೈನಾನ್ಸ್ ಅವರು ಹಣ ವಸೂಲಿಗೆ ಔಟ್ ಸೋರ್ಸ್ ಕೊಟ್ಟಿರುತ್ತಾರೆ. ಅವರು ಬಂದು ಗುಂಡಾ ವರ್ತನೆ ಮಾಡೋ ಕೆಲಸ ಮಾಡ್ತಿದ್ದಾರೆ. ಆದರೆ ಅದನ್ನ ಮಾಡಿದ್ರೆ ಕ್ರಮ ತೆಗೆದುಕೊಳ್ಳುತ್ತೀವಿ. ಕಂಪನಿ ಅವರಿಗೂ ಈಗಾಗಲೇ ಸೂಚನೆ ಕೊಟ್ಟಿದ್ದೇವೆ‌. ಇವತ್ತು ಸುಗ್ರಿವಾಜ್ಞೆ ಹೊರಡಿಸೋ ಕಾನೂನು ಬಗ್ಗೆ ಸಭೆ ಮಾಡಿ ಇವತ್ತೇ ಕಾನೂನು ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago