ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಕಾನೂನು ನಾಳೆಯ ಕ್ಯಾಬಿನೆಟ್‌ನಲ್ಲಿ ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸಿಎಂ ಸಭೆ ಮಾಡಿದ ಮೇಲೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು. ಆಗ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಮೊನ್ನೆ ಸಿಎಂ ಸಭೆಯಲ್ಲಿ ಪೊಲೀಸರು ಇಂತಹ ಕೇಸ್ ಬಗ್ಗೆ ಸುಮೋಟೋ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದೇವೆ. ಇವತ್ತು ಮೈಕ್ರೋ ಫೈನಾನ್ಸ್ ಕಾನೂನು ಮಾಡುವ ಬಗ್ಗೆ ಸಭೆ ಕರೆದಿದ್ದೇವೆ. ಇವತ್ತು ಬಿಲ್ ಬಗ್ಗೆ ನಾನು, ಕಾನೂನು ಸಚಿವರು, ಕಂದಾಯ ಸಚಿವರು ಸಭೆ ಮಾಡಿ ಬಿಲ್ ಅಂತಿಮ ಮಾಡುತ್ತೇವೆ. ನಾಳೆಯ ಕ್ಯಾಬಿನೆಟ್ ನಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಕ್ರಮ ತೆಗೆದುಕೊಂಡು ರಾಜ್ಯಪಾಲರಿಗೆ ಕಳಿಸ್ತೀವಿ ಅಂತ ತಿಳಿಸಿದರು.
ಈಗಾಗಲೇ SP-DCಗಳ ಸಭೆ ಮಾಡಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಸಹಾಯವಾಣಿ ಕೂಡಾ ಪ್ರಾರಂಭ ಮಾಡಿದ್ದೇವೆ. ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಡುವುದು ಮತ್ತು ಇದಕ್ಕಾಗಿ ಒಂದು ಪ್ರತ್ಯೇಕ ವಿಂಗ್ ಪ್ರಾರಂಭ ಮಾಡೋದು ಬಿಲ್ ನಲ್ಲಿ ಅಂಶಗಳನ್ನ ಸೇರಿಸಿದ್ದೇವೆ ಎಂದರು.
ಕೆಲವು ಮೈಕ್ರೋ ಫೈನಾನ್ಸ್ ಅವರು ಹಣ ವಸೂಲಿಗೆ ಔಟ್ ಸೋರ್ಸ್ ಕೊಟ್ಟಿರುತ್ತಾರೆ. ಅವರು ಬಂದು ಗುಂಡಾ ವರ್ತನೆ ಮಾಡೋ ಕೆಲಸ ಮಾಡ್ತಿದ್ದಾರೆ. ಆದರೆ ಅದನ್ನ ಮಾಡಿದ್ರೆ ಕ್ರಮ ತೆಗೆದುಕೊಳ್ಳುತ್ತೀವಿ. ಕಂಪನಿ ಅವರಿಗೂ ಈಗಾಗಲೇ ಸೂಚನೆ ಕೊಟ್ಟಿದ್ದೇವೆ. ಇವತ್ತು ಸುಗ್ರಿವಾಜ್ಞೆ ಹೊರಡಿಸೋ ಕಾನೂನು ಬಗ್ಗೆ ಸಭೆ ಮಾಡಿ ಇವತ್ತೇ ಕಾನೂನು ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…