Featured

ಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಏರಿಕೆ : ಜಿ.ಪರಮೇಶ್ವರ್ – vishwanews24

ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ ,ಇದಕ್ಕಾಗಿ ಶಿಕ್ಷೆಯ ಪ್ರಮಾಣ ಹೆಚ್ಚಳ : ಜಿ.ಪರಮೇಶ್ವರ್

ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿ, ಕಿರುಕುಳ ನೀಡಿದವರಿಗೆ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನು 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ಮಾಡಿದ್ದೇವೆ. ಕಿರುಕುಳ ಕೊಡೋರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದು ಹೇಳಿದರು.

ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ. ಇದಕ್ಕಾಗಿ ಫೈನ್ ಮತ್ತು ಶಿಕ್ಷೆ ಎರಡನ್ನೂ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ. ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ ಎಂದು ಹೇಳಿದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

12 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

16 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

16 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

17 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

17 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

18 hours ago