Featured

ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ : ಗೃಹ ಸಚಿವ ಪರಮೇಶ್ವರ್ – vishwanews24

ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರ ಕಠಿಣ ಕಾನೂನು ತರುತ್ತದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ನಿಂದ ತೊಂದರೆ ಆಗುತ್ತಿದೆ ಎಂದು ರಾಜ್ಯಾದ್ಯಂತ ದೂರು ದಾಖಲಾಗಿದೆ. ಮೈಕ್ರೋ ಫೈನಾನ್ಸ್ ಸಂಬಂಧ ಈಗ ಇರುವ ನಿಯಮಗಳು ಅಷ್ಟು ಕಠಿಣವಾಗಿ ಇಲ್ಲ ಅಂತ ನಮ್ಮ ಗಮನಕ್ಕೆ ಬಂದಿದೆ ಎಂದರು.

ಬ್ಯಾಂಕ್ ನಿಯಮಗಳ ಪ್ರಕಾರ ಹಣ ರಿಕವರಿ ಮಾಡಲು ಕಾನೂನು ಇದೆ. ಅದೇ ರೀತಿ ಅವರ ರಕ್ಷಣೆ ಮಾಡಲು ಕಾನೂನು ಇದೆ. ಈಗ ಇರುವ ಕಾನೂನು ಸಾಕಾಗುತ್ತಿಲ್ಲ. ಕಠಿಣವಾಗಿ ಇಲ್ಲ ಅಂತ ನಮ್ಮ ಇಲಾಖೆಯಿಂದ ಅನೇಕ ವರದಿಗಳು ಬಂದಿವೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಮಾಡೋ ಅಗತ್ಯವಿದೆ. ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣಕ್ಕೆ ಕಠಿಣ ಕಾನೂನು ತರುತ್ತದೆ ಅಂತ ತಿಳಿಸಿದರು.

ಸಾಲ ತಗೊಂಡು ಸಾಲ ವಾಪಸ್ ಕಟ್ಟದೇ ಹೋದ್ರೆ ಅವರು ಸಾಲಗಾರರ ಬಳಿಯೇ ಕ್ರಮ ತೆಗೆದುಕೊಳ್ಳಬಹುದು ಅಂತ ಫೈನಾನ್ಸ್ ಅವರು ಸಹಿ ಹಾಕಿಸಿಕೊಂಡಿರುತ್ತಾರೆ. ಸಾಲ ತಗೋಳೋವಾಗ ಹತ್ತಾರು ಕಡೆ ಸಹಿ ತೆಗೆದುಕೊಂಡಿರುತ್ತಾರೆ. ಆ ಸಹಿ ಯಾಕೆ‌ ಮಾಡಿರುತ್ತೇವೆ ಅಂತಾನೂ ಗ್ರಾಹಕರಿಗೆ ಗೊತ್ತಿರೋದಿಲ್ಲ .ಅದು ಕಮಿಟ್ ಮೆಂಟ್ ಆಗಿರುತ್ತದೆ. ಆ ಆಧಾರದಲ್ಲಿ ಮನೆ ರೇಡ್ ಮಾಡೋದು, ಮನೆ ಸೀಜ್ ಮಾಡೋದು‌ ಎಲ್ಲಾ ಮಾಡ್ತಿದ್ದಾರೆ.ಇದಕ್ಕೆ ‌ಕಾನೂನಿನಲ್ಲೆ ಪರಿಹಾರ ಕಂಡುಹಿಡಿಯಬೇಕು ಎಂದರು. ಇದನ್ನೂ ಓದಿ: ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

ಈಗಾಗಲೇ ಕಾನೂನು ಸಚಿವರು ಅದರ ಬಗ್ಗೆ ಗಮನಹರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಕಾನೂನು ಬದಲಾವಣೆ ಮಾಡಿ ಕಠಿಣ ನಿಯಮ ಜಾರಿ ಮಾಡುವುದಾಗಿ ಹೇಳಿದ್ದಾರೆ. ನಾಳೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಚರ್ಚೆ ಮಾಡಿ ಏನೆಲ್ಲ ಕೇಸ್ ಗಳು ಅಗಿವೆ. ಕಾನೂನು ಕಠಿಣವಾಗಿ ಇಲ್ಲ ಅನ್ನೋದನ್ನು ಪರಿಶೀಲನೆ ‌ಮಾಡ್ತೀವಿ. ಈಗ ಆಗಿರುವ ಕೇಸ್ ಗಳ ಬಗ್ಗೆಯೂ ಸಭೆಯಲ್ಲಿ ಪರಿಶೀಲನೆ ಮಾಡುತ್ತೇವೆ ಅಂತ ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago