Featured

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – vishwanews24

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಬೆಂಗಳೂರು : ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಟ್ಟುವ ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್‌ ಕಳಿಸಿದ್ದಾರೆ. ಅಲ್ಲದೆ, ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿದ್ದಾರೆ.

“ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ” ಎಂದು ರಾಜ್ಯಪಾಲರು ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರ ಕಚೇರಿ ಕೊಟ್ಟ ಕಾರಣಗಳು ಹೀಗಿವೆ :

► ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಪರೀತವಾಗಿದೆ.

► ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು.

► ಸುಗ್ರೀವಾಜ್ಞೆಯು ಮೈಕ್ರೊ ಫೈನಾನ್ಸ್ ಕಂಪನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರಿಗೂ ತೊಂದರೆಯಾಗಲಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

14 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago