ತುಮಕೂರು: ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ನನ್ನನ್ನು ಪಕ್ಷದಿಂದ ಹೊರಹಾಕಿದರೂ ಪರವಾಗಿಲ್ಲ. ನಮಗೆ ಈ ಮೈತ್ರಿ ಸಹವಾಸ ಬೇಡವೇ ಬೇಡ ಎಂದು ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರು ಮೈತ್ರಿ ಮಾಡಿಕೊಳ್ಳದೆ ಹೋಗಿದ್ದರೆ ಮಾಜಿ ಪ್ರಧಾನಿ ದೇವೇಗೌಡರು ಎರಡು ಲಕ್ಷ ಮತಗಳ ಅಂತರದಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುತ್ತಿದ್ದರು. ನಾನು ಹೇಳುವುದು ನಮಗೆ ಮೈತ್ರಿ ಬೇಡವೇ ಬೇಡ. ಇದರಿಂದಲೇ ನಮಗೆ ಹಿನ್ನಡೆಯಾಗಿದೆ ಎಂದರು.
ಅಲ್ಲಿ ಆಪರೇಷನ್ ಎಂದು ಒಬ್ಬರು ಬಾಂಬೆಗೆ ಹೋದರು. ದೆಹಲಿಗೆ ಹೋದರು. ಸರ್ಕಾರ ಬಿದ್ದು ಹೋಯಿತು. ಪ್ರತಿ ದಿನ ಇದೇ ಆಗಿದ್ದು, ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಇದೇ ಸೋಲಿಗೆ ಕಾರಣ ಎಂದು ಶಾಸಕ ಗೌರಿಶಂಕರ್ ಬೇಸರ ವ್ಯಕ್ತಪಡಿಸಿದರು.
ಸಿಎಂ ಎಚ್ಡಿಕೆ ಮಾಧ್ಯಗಳೊಂದಿಗೆ ಮಾತನಾಡದಂತೆ ಜೆಡಿಎಸ್ನ ಮುಖಂಡರಿಗೆ ತಾಕೀತು ಮಾಡಿದ್ದು ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಳ್ಳುವುದು, ಹೇಳಿಕೆಗಳನ್ನು ನೀಡುವುದು ಮಾಡಬಾರದು ಎಂದಿದ್ದರು. ಆದರೂ ಗೌರಿಶಂಕರ್ ಇಂತಹ ಹೇಳಿಕೆ ನೀಡಿರುವುದು ರಾಜ್ಯ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ತೋರಿಸುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…