ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತಿರುವ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಅವರು ಕಾಂಗ್ರೆಸ್ ಹೈಕಮಾಂಡ್‍ಗೆ ಸ್ಪಷ್ಟ ಸಂದೇಶ ರವಾನಿಸಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಮಾತನಾಡಿದ್ದ ದೇವೇಗೌಡರು ಸರ್ಕಾರ ಸಮಸ್ಯೆ ಇಲ್ಲದೆ ನಡೆಯುವುದಾದರೆ ಮಾತ್ರ ಆಡಳಿತ ನಡೆಸೋಣ. ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ. ಮೈತ್ರಿ ಸಾಧ್ಯವಿಲ್ಲವಾದರೆ ಅವರವರ ದಾರಿ ಅವರವರದ್ದು. ಜತೆಗೆ ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಎಂದು ಗೌಡರು ತಿಳಿಸಿದ್ದರು ಎಂದು ತಿಳಿದು ಬಂದಿದೆ.
ಸಮ್ಮಿಶ್ರ ಸರ್ಕಾರದ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶಿತರಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ಶೀಘ್ರ ಕಡಿವಾಣ ಹಾಕಬೇಕು ಎಂದು ಕೈ ಹೈಕಮಾಂಡ್‍ಗೆ ದೇವೇಗೌಡರು ಸಂದೇಶ ರವಾನಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರಿಪಡಿಸಬೇಕು. ಒಂದು ವೇಳೆ ಸಿದ್ದರಾಮಯ್ಯ ಸರಿ ಇಲ್ಲದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ. ನನ್ನ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವ ದಿನದಿಂದ ಅವನಿಗೆ ಕಿರುಕುಳ ನಿಲ್ಲುತ್ತಿಲ್ಲ. ಬರೀ ಇದೆ ಆಯಿತು, ನೀವು ಮಧ್ಯಪ್ರವೇಶ ಮಾಡಿ ಸರಿ ಮಾಡಿ ಇಲ್ಲದಿದ್ದರೆ ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.
2019ರಲ್ಲಿ ಬರಲಿರುವ ಲೋಕಸಭೆ ಚುನಾವಣೆ ನಿಮಗೆ ಎಷ್ಟು ಮುಖ್ಯವೋ ನಮಗೂ ಕೂಡ ಅಷ್ಟೇ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರು ಮೇಲಾಟಗಳನ್ನು ನಿಲ್ಲಿಸದಿದ್ದರೆ ನಮಗೂ ದಾರಿ ಬದಲಿಸಲು ಗೊತ್ತಿದೆ ಎಂದು ಎಐಸಿಸಿ ನಾಯಕ ಗುಲಾಂ ನಭೀ ಅಜಾದ್ ಅವರಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…