Featured

ಮೈತ್ರಿ ಕಷ್ಟವಾದರೆ ಸ್ಪಷ್ಟವಾಗಿ ಹೇಳಿಬಿಡಿ ; ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ : ದೇವೇಗೌಡ

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತಿರುವ ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡ ಅವರು ಕಾಂಗ್ರೆಸ್​ ಹೈಕಮಾಂಡ್​ಗೆ ಸ್ಪಷ್ಟ ಸಂದೇಶ ರವಾನಿಸಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಅವರೊಂದಿಗೆ ಮಾತನಾಡಿದ್ದ ದೇವೇಗೌಡರು ಸರ್ಕಾರ ಸಮಸ್ಯೆ ಇಲ್ಲದೆ ನಡೆಯುವುದಾದರೆ ಮಾತ್ರ ಆಡಳಿತ ನಡೆಸೋಣ. ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ. ಮೈತ್ರಿ ಸಾಧ್ಯವಿಲ್ಲವಾದರೆ ಅವರವರ ದಾರಿ ಅವರವರದ್ದು. ಜತೆಗೆ ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಎಂದು ಗೌಡರು ತಿಳಿಸಿದ್ದರು ಎಂದು ತಿಳಿದು ಬಂದಿದೆ.

ಸಮ್ಮಿಶ್ರ ಸರ್ಕಾರದ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶಿತರಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ಶೀಘ್ರ ಕಡಿವಾಣ ಹಾಕಬೇಕು ಎಂದು ಕೈ ಹೈಕಮಾಂಡ್‍ಗೆ ದೇವೇಗೌಡರು ಸಂದೇಶ ರವಾನಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರಿಪಡಿಸಬೇಕು. ಒಂದು ವೇಳೆ ಸಿದ್ದರಾಮಯ್ಯ ಸರಿ ಇಲ್ಲದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ. ನನ್ನ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವ ದಿನದಿಂದ ಅವನಿಗೆ ಕಿರುಕುಳ ನಿಲ್ಲುತ್ತಿಲ್ಲ. ಬರೀ ಇದೆ ಆಯಿತು, ನೀವು ಮಧ್ಯಪ್ರವೇಶ ಮಾಡಿ ಸರಿ ಮಾಡಿ ಇಲ್ಲದಿದ್ದರೆ ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.

2019ರಲ್ಲಿ ಬರಲಿರುವ ಲೋಕಸಭೆ ಚುನಾವಣೆ ನಿಮಗೆ ಎಷ್ಟು ಮುಖ್ಯವೋ ನಮಗೂ ಕೂಡ ಅಷ್ಟೇ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರು ಮೇಲಾಟಗಳನ್ನು ನಿಲ್ಲಿಸದಿದ್ದರೆ ನಮಗೂ ದಾರಿ ಬದಲಿಸಲು ಗೊತ್ತಿದೆ ಎಂದು ಎಐಸಿಸಿ ನಾಯಕ ಗುಲಾಂ ನಭೀ ಅಜಾದ್  ಅವರಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago