ಹಾಸನ : ‘ಸರ್ಕಾರಕ್ಕೆ ಇದೇ ರೀತಿ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ. ರಾಜ್ಯದ ಜನರಿಗೆ ಬಿಜೆಪಿ ವಿರುದ್ಧ ದಂಗೆ ಎಳುವಂತೆ ಕರೆ ನೀಡುತ್ತೇನೆ‘…ಇದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ ಹೇಳಿಕೆಯಾಗಿದೆ.
“ಭಾರತೀಯ ಜನತಾ ಪಕ್ಷ ಹಾಗೂ ಯಡಿಯೂರಪ್ಪ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದರೆ. ಆದರೆ ಒಂದು ವೇಳೆ ಈ ಮೈತ್ರಿ ಸರಕಾರ ಉರುಳಿದರೆ ನಾನು ಜನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಿ ದಂಗೆ ಎಬ್ಬಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರಲು ನಾನು ಬಿಡೋದಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ತಾನು ಯಾವ ರೀತಿಯ ಅಧಿಕಾರದಾಹಿ ಎಂಬುವುದು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ.
“ಸರ್ಕಾರವನ್ನು ಉರುಳಿಸಲು ಯತ್ನಿಸಿದರೆ ನಾನು ಸುಮ್ಮನಿರೋದಿಲ್ಲ. ನಾನು ಮುಖ್ಯಮಂತ್ರಿ ಹಾಗೂ ನನ್ನ ಬಳಿ ಅಧಿಕಾರವಿದೆ. ಸರ್ಕಾರ ನನ್ನದು, ನಾನು ಈ ಸಂದರ್ಭದಲ್ಲಿ ಏನು ಬೇಕಾದರೂ ಮಾಡಬಹುದು ಎಚ್ಚರಿಕೆ. ಸರ್ಕಾರ ಅಲುಗಾಡಿಸಿದರೆ ನಮ್ಮ ತಾಕತ್ತು ತೋರಿಸುತ್ತೇವೆ” ಎಂದೂ ಹೇಳಿದ್ದಾರೆ. ಅಂದರೆ ಸರ್ಕಾರವನ್ನು ಸುಮ್ಮನಿರಲು ಬಿಟ್ಟರೆ ಯಾವ ಕಳ್ಳರನ್ನೂ ಈ ಸರ್ಕಾರ ಸಮರ್ಥಿಸುತ್ತೆ ಹಾಗೂ ಸರ್ಕಾರಕ್ಕೆ ಸಂಕಷ್ಟ ತಂದರೆ ಅವರನ್ನು ತಮ್ಮ ಅಧಿಕಾರ ಬಳಸಿ ಅವರನ್ನು ಜೈಲಿಗಟ್ಟುತ್ತೇವೆ ಎಂಬರ್ಥದಲ್ಲಿ ಕುಮಾರಸ್ವಾಮಿ ಮಾತನಾಡಿದ್ದಾರೆ.
ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದ ಸಿಎಂ ಪರ್ಸಂಟೇಜ್ ಸಿಸ್ಟಂನ ಜನಕ ಯಡಿಯೂರಪ್ಪ ಎಂದು ಆರೋಪಿಸಿ ನಾನು ಸುಮ್ಮನಿರುವುದಿಲ್ಲ . ಸರ್ಕಾರ ನನ್ನ ಬಳಿ ಇದೆ ಏನು ಮಾಡಬೇಕೆಂದು ಗೊತ್ತಿದೆ ಎಂದಿದ್ದರು. ಬೆನ್ನಲ್ಲೆ ಯಡಿಯೂರಪ್ಪ ಕೇಂದ್ರ ಸರ್ಕಾರ ನಮ್ಮದು ಸಂಜೆ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಪ್ರತಿಸವಾಲು ಸಾಕಿದ್ದರು.
ಒಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಕೆಲ ಶಾಸಕರು ಮಹಾರಾಷ್ಟ್ರದ ರೆಸಾರ್ಟ್‌ಗೆ ತೆರಳಲಿದ್ದಾರೆ ಎನ್ನುವ ಗುಮಾನಿಯ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದು, ಸರ್ಕಾರ ಉಳಿಯುತ್ತದೆಯೋ ಎನ್ನುವ ಪ್ರಶ್ನೆ ಮೂಡಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…