Featured

ಮೈತ್ರಿ ಸರಕಾರ ಉರುಳಿದರೆ ನಾನು ಜನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಿ ದಂಗೆ ಎಬ್ಬಿಸುತ್ತೇನೆ ; ಬಿಜೆಪಿ ಅಧಿಕಾರಕ್ಕೆ ಬರಲು ನಾನು ಬಿಡೋದಿಲ್ಲ:ಕುಮಾರಸ್ವಾಮಿ

ಹಾಸನ : ಸರ್ಕಾರಕ್ಕೆ ಇದೇ ರೀತಿ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ. ರಾಜ್ಯದ ಜನರಿಗೆ ಬಿಜೆಪಿ ವಿರುದ್ಧ  ದಂಗೆ ಎಳುವಂತೆ ಕರೆ ನೀಡುತ್ತೇನೆ‘…ಇದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಿದ ಹೇಳಿಕೆಯಾಗಿದೆ.

“ಭಾರತೀಯ ಜನತಾ ಪಕ್ಷ ಹಾಗೂ ಯಡಿಯೂರಪ್ಪ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದರೆ. ಆದರೆ ಒಂದು ವೇಳೆ ಈ ಮೈತ್ರಿ ಸರಕಾರ ಉರುಳಿದರೆ ನಾನು ಜನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಿ ದಂಗೆ ಎಬ್ಬಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರಲು ನಾನು ಬಿಡೋದಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ತಾನು ಯಾವ ರೀತಿಯ ಅಧಿಕಾರದಾಹಿ ಎಂಬುವುದು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ.

“ಸರ್ಕಾರವನ್ನು ಉರುಳಿಸಲು ಯತ್ನಿಸಿದರೆ ನಾನು ಸುಮ್ಮನಿರೋದಿಲ್ಲ. ನಾನು ಮುಖ್ಯಮಂತ್ರಿ ಹಾಗೂ ನನ್ನ ಬಳಿ ಅಧಿಕಾರವಿದೆ. ಸರ್ಕಾರ ನನ್ನದು, ನಾನು ಈ ಸಂದರ್ಭದಲ್ಲಿ ಏನು ಬೇಕಾದರೂ ಮಾಡಬಹುದು ಎಚ್ಚರಿಕೆ. ಸರ್ಕಾರ ಅಲುಗಾಡಿಸಿದರೆ ನಮ್ಮ ತಾಕತ್ತು ತೋರಿಸುತ್ತೇವೆ” ಎಂದೂ ಹೇಳಿದ್ದಾರೆ. ಅಂದರೆ ಸರ್ಕಾರವನ್ನು ಸುಮ್ಮನಿರಲು ಬಿಟ್ಟರೆ ಯಾವ ಕಳ್ಳರನ್ನೂ ಈ ಸರ್ಕಾರ ಸಮರ್ಥಿಸುತ್ತೆ ಹಾಗೂ ಸರ್ಕಾರಕ್ಕೆ ಸಂಕಷ್ಟ ತಂದರೆ ಅವರನ್ನು ತಮ್ಮ ಅಧಿಕಾರ ಬಳಸಿ ಅವರನ್ನು ಜೈಲಿಗಟ್ಟುತ್ತೇವೆ ಎಂಬರ್ಥದಲ್ಲಿ ಕುಮಾರಸ್ವಾಮಿ ಮಾತನಾಡಿದ್ದಾರೆ.

ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದ ಸಿಎಂ ಪರ್ಸಂಟೇಜ್‌ ಸಿಸ್ಟಂನ ಜನಕ ಯಡಿಯೂರಪ್ಪ ಎಂದು ಆರೋಪಿಸಿ ನಾನು ಸುಮ್ಮನಿರುವುದಿಲ್ಲ . ಸರ್ಕಾರ ನನ್ನ ಬಳಿ ಇದೆ ಏನು ಮಾಡಬೇಕೆಂದು ಗೊತ್ತಿದೆ ಎಂದಿದ್ದರು. ಬೆನ್ನಲ್ಲೆ ಯಡಿಯೂರಪ್ಪ ಕೇಂದ್ರ ಸರ್ಕಾರ ನಮ್ಮದು ಸಂಜೆ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಪ್ರತಿಸವಾಲು ಸಾಕಿದ್ದರು.

ಒಂದೆಡೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಕೆಲ ಶಾಸಕರು ಮಹಾರಾಷ್ಟ್ರದ ರೆಸಾರ್ಟ್‌ಗೆ ತೆರಳಲಿದ್ದಾರೆ ಎನ್ನುವ ಗುಮಾನಿಯ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದು, ಸರ್ಕಾರ ಉಳಿಯುತ್ತದೆಯೋ ಎನ್ನುವ ಪ್ರಶ್ನೆ ಮೂಡಿಸಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

9 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

9 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago