ರೈತರ ಸಾಲಮನ್ನಾ , ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ತಡೆಗಟ್ಟುವಿಕೆ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಇದೇ 30ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆ ಜೂ.30ರಿಂದ ಜುಲೈ 15ರವರೆಗೆ ಒಟ್ಟು ಆರು ತಂಡಗಳಾಗಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಯಲಿದೆ.
ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಿರುವ ಬಿಜೆಪಿ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ಮೂಲಕ ಪ್ರಾರಂಭದಲ್ಲೇ ದೋಸ್ತಿ ಸರ್ಕಾರದ ವಿರುದ್ಧ ರಣ ಕಹಳೆ ಮೊಳಗಿಸಿದ್ದಾರೆ. ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಂಚರಿಸಲಿರುವ ಈ ತಂಡವು ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆ ಮೇರೆಗೆ ಪ್ರವಾಸ ಆರಂಭಿಸಲಿರುವ ಯುವ ಮೋರ್ಚಾದ ನಾಯಕರು ರೈತರ ಸಾಲಮನ್ನಾವನ್ನೇ ಪ್ರಧಾನವಾಗಿಟ್ಟುಕೊಂಡು ಹೋರಾಟ ನಡೆಸಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ಚುನಾವಣೆಗೂ ಮುನ್ನ ರೈತರ ಸಾಲಮನ್ನಾ ಮಾಡುವ ವಿಷಯದಲ್ಲಿ ಜನತೆಗೆ ನೀಡಿದ ಆಶ್ವಾಸನೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರು ನಡೆದುಕೊಳ್ಳುತ್ತಿರುವ ರೀತಿನೀತಿಗಳ ಬಗ್ಗೆಯೂ ಜನತೆಗೆ ರೈತ ಮೋರ್ಚಾ ಮನವರಿಕೆ ಮಾಡಲಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…