ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ : ಕೃಷ್ಣಭೈರೆಗೌಡ -Vishwanews24
ಶಿವಮೊಗ್ಗ: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೆಗೌಡ ಅವರು ಅಸಮಧಾನ ಹೊರಹಾಕಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೋಷನ್ ಬೇಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ರೋಷನ್ ಬೇಗ್ ಅವಕಾಶವಾದಿ ರಾಜಕಾರಣಿ. ಅವರನ್ನು ಮಂತ್ರಿ ಮಾಡಿದ್ದರೆ ಎಲ್ಲವೂ ಸರಿಯಾಗಿ ಇರುತ್ತಿತ್ತು. ಮಂತ್ರಿ ಮಾಡದೇ ಇರುವುದರಿಂದ, ಬೇಗ ಈ ರೀತಿ ಹೇಳಿಕೆ ನೀಡಿದ್ದಾರೆ. ಇದು ಪಕ್ಷಕ್ಕೆ ಶೋಭೆ ತರುವಂತದ್ದಲ್ಲ. ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಅವನ್ನು ಪಕ್ಷದೊಳಗೆ ಸರಿಪಡಿಸಿಕೊಳ್ಳಬೇಕು. ಬೀದಿಯಲ್ಲಿ ನಿಂತು ಮಾತನಾಡುವುದಲ್ಲ. ಅವರ ವಿರುದ್ಧದ ಶಿಸ್ತಿನ ಕ್ರಮ ಸರಿಯಾಗಿದೆ,” ಎಂದು ರೋಷನ್ ಬೇಗ್ ಅವರ ಅಮಾನತು ಕ್ರಮವನ್ನು ಸಚಿವರು ಸಮರ್ಥನೆ ಮಾಡಿಕೊಂಡರು
