ಲಕ್ನೋ: ಮೈತ್ರಿಯನ್ನು ಹೇಗೆ ನಿಭಾಯಿಸಬೇಕು ಅಂತ ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಸಮ್ಮಿಶ್ರ ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಅನ್ನೋದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿತುಕೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
”ಮೈತ್ರಿಕೂಟ ಎಂದಮೇಲೆ ಏರಿಳಿತಗಳು ಇದ್ದೇ ಇರುತ್ತವೆ. ನೇತೃತ್ವ ವಹಿಸಿದವರು ಅದನ್ನೆಲ್ಲ ಸಂಭಾಳಿಸಿಕೊಂಡು, ಎಲ್ಲರನ್ನೂ ಜತೆಗೆ ಕರೆದುಕೊಂಡು ಹೋಗಬೇಕು. ತನ್ನ ಕೆಲವು ಸೀಟುಗಳನ್ನು ಬಿಟ್ಟು ಕೊಟ್ಟಾದರೂ ಮೈತ್ರಿ ಉಳಿಸಿಕೊಳ್ಳಬೇಕು ಎಂಬ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ. ಮಿತ್ರಪಕ್ಷಗಳ ಎಲ್ಲ ಒತ್ತಡಗಳನ್ನೂ ಸಹಿಸಿಕೊಂಡು ಮೈತ್ರಿ ಉಳಿಸಿಕೊಳ್ಳುವಲ್ಲಿ ಆ ಪಕ್ಷ ಯಶಸ್ವಿಯಾಗಿದೆ,” ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಹೇಳಿದ್ದಾರೆ.
ಬಿಜೆಪಿ ಮೈತ್ರಿಯನ್ನು ಹೇಗೆ ಉಳಿಸಿಕೊಳ್ಳುತ್ತದೆ ಅನ್ನೋದಕ್ಕೆ ಬಿಹಾರ ಅತ್ಯುತ್ತಮ ಉದಾಹರಣೆ. 2014ರಲ್ಲಿ ಅಲ್ಲಿ 40 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22ರಲ್ಲಿ, ಜೆಡಿಯು ಕೇವಲ ಎರಡರಲ್ಲಿ ಗೆದ್ದಿತ್ತು. ಆದರೂ ಈ ಸಲ ಜೆಡಿಯು ಜತೆ ಸಮಾನ ಕ್ಷೇತ್ರಗಳಲ್ಲಿ (50:50) ಸ್ಪರ್ಧಿಸುವ ಒಪ್ಪಂದ ಮಾಡಿಕೊಂಡು ಮೈತ್ರಿ ಮಾಡಲು ನಿರ್ಧರಿಸಿತ್ತು. ಕಾಂಗ್ರೆಸ್‍ನವರು ಬಿಜೆಪಿಯಿಂದ ಮೈತ್ರಿ ಹೇಗೆ ಉಳಿಸಿಕೊಳ್ಳಬೇಕು, ನಿಭಾಯಿಸಬೇಕು ಅಂತ ಕಲಿಯಬೇಕು ಎಂದಿದ್ದಾರೆ.
ಕಾಂಗ್ರೆಸ್ ದೊಡ್ಡ ಪಕ್ಷ. ಅವರು ಇತರೇ ಪಕ್ಷಗಳಿಗೆ ನೆರವಾಗಬೇಕು. ಉದಾಹರಣೆಗೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಾಗೂ ದಿಲ್ಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೆರವು ನೀಡಬೇಕು. ಬಿಜೆಪಿ ವಿರುದ್ಧ ಹೋರಾಡುವ ಶಕ್ತಿ ಈ ಇಬ್ಬರಿಗೂ ನಾಯಕರಿಗೆ ಇದೆ ಎಂದು ಅಖಿಲೇಶ್ ಯಾದವ್ ತಿಳಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…