Featured

ಮೈತ್ರಿ ಹೇಗೆ ಉಳಿಸಿಕೊಳ್ಳಬೇಕು, ಹೇಗೆ ನಿಭಾಯಿಸಬೇಕು ಎಂದು ಕಾಂಗ್ರೆಸ್ ನವರು ಬಿಜೆಪಿಯನ್ನು ನೋಡಿ ಕಲಿಯಬೇಕು : ಅಖಿಲೇಶ್ ಯಾದವ್

ಲಕ್ನೋ: ಮೈತ್ರಿಯನ್ನು ಹೇಗೆ ನಿಭಾಯಿಸಬೇಕು ಅಂತ ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಸಮ್ಮಿಶ್ರ ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಅನ್ನೋದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿತುಕೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

”ಮೈತ್ರಿಕೂಟ ಎಂದಮೇಲೆ ಏರಿಳಿತಗಳು ಇದ್ದೇ ಇರುತ್ತವೆ. ನೇತೃತ್ವ ವಹಿಸಿದವರು ಅದನ್ನೆಲ್ಲ ಸಂಭಾಳಿಸಿಕೊಂಡು, ಎಲ್ಲರನ್ನೂ ಜತೆಗೆ ಕರೆದುಕೊಂಡು ಹೋಗಬೇಕು. ತನ್ನ ಕೆಲವು ಸೀಟುಗಳನ್ನು ಬಿಟ್ಟು ಕೊಟ್ಟಾದರೂ ಮೈತ್ರಿ ಉಳಿಸಿಕೊಳ್ಳಬೇಕು ಎಂಬ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ. ಮಿತ್ರಪಕ್ಷಗಳ ಎಲ್ಲ ಒತ್ತಡಗಳನ್ನೂ ಸಹಿಸಿಕೊಂಡು ಮೈತ್ರಿ ಉಳಿಸಿಕೊಳ್ಳುವಲ್ಲಿ ಆ ಪಕ್ಷ ಯಶಸ್ವಿಯಾಗಿದೆ,” ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್‌ ಹೇಳಿದ್ದಾರೆ.

ಬಿಜೆಪಿ ಮೈತ್ರಿಯನ್ನು ಹೇಗೆ ಉಳಿಸಿಕೊಳ್ಳುತ್ತದೆ ಅನ್ನೋದಕ್ಕೆ ಬಿಹಾರ ಅತ್ಯುತ್ತಮ ಉದಾಹರಣೆ. 2014ರಲ್ಲಿ ಅಲ್ಲಿ 40 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22ರಲ್ಲಿ, ಜೆಡಿಯು ಕೇವಲ ಎರಡರಲ್ಲಿ ಗೆದ್ದಿತ್ತು. ಆದರೂ ಈ ಸಲ ಜೆಡಿಯು ಜತೆ ಸಮಾನ ಕ್ಷೇತ್ರಗಳಲ್ಲಿ (50:50) ಸ್ಪರ್ಧಿಸುವ ಒಪ್ಪಂದ ಮಾಡಿಕೊಂಡು ಮೈತ್ರಿ ಮಾಡಲು ನಿರ್ಧರಿಸಿತ್ತು. ಕಾಂಗ್ರೆಸ್‍ನವರು ಬಿಜೆಪಿಯಿಂದ ಮೈತ್ರಿ ಹೇಗೆ ಉಳಿಸಿಕೊಳ್ಳಬೇಕು, ನಿಭಾಯಿಸಬೇಕು ಅಂತ ಕಲಿಯಬೇಕು ಎಂದಿದ್ದಾರೆ.

ಕಾಂಗ್ರೆಸ್ ದೊಡ್ಡ ಪಕ್ಷ. ಅವರು ಇತರೇ ಪಕ್ಷಗಳಿಗೆ ನೆರವಾಗಬೇಕು. ಉದಾಹರಣೆಗೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಾಗೂ ದಿಲ್ಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೆರವು ನೀಡಬೇಕು. ಬಿಜೆಪಿ ವಿರುದ್ಧ ಹೋರಾಡುವ ಶಕ್ತಿ ಈ ಇಬ್ಬರಿಗೂ ನಾಯಕರಿಗೆ ಇದೆ ಎಂದು ಅಖಿಲೇಶ್ ಯಾದವ್ ತಿಳಿದ್ದಾರೆ.

 

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago