ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.
ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್(Helicopter) ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿದ್ದಾರೆ.ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
2018 ರ ಫೆಬ್ರವರಿಯಲ್ಲಿ ಸುಕ್ಷೇತ್ರದಲ್ಲಿ ಜರುಗಿದ ಕಾರಣೀಕ ಮಹೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್‌ನಲ್ಲಿ ಬಂದಿದ್ದರು. ಸುಕ್ಷೇತ್ರದಲ್ಲಿ ಹೆಲಿಕಾಪ್ಟರ್ ಹಾರಾಟ ನಡೆಸಿ ಇಲ್ಲಿನ ದೈವಿಕ ಪರಂಪರೆಗೆ ಡಿಕೆಶಿ ಅಪಚಾರ ಎಸಗಿ, ಸ್ವಾಮಿಯ ಅವಕೃಪೆಗೆ ಗುರಿಯಾಗಿದ್ದಾರೆ ಎಂದು ವ್ಯಾಖ್ಯಾನಿಸಲಾಗಿತ್ತು. ಕಾಕತಾಳೀಯ ಎಂಬಂತೆ ಕೆಲವೇ ದಿನಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿಗೆ ತುತ್ತಾಗಿ ಜೈಲು ಸೇರಿದ್ದರು. ಆಗ ಸಂಕಷ್ಟ ನಿವಾರಣೆಗೆ ಪ್ರಾರ್ಥಿಸಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸ್ವಾಮಿಗೆ ಪೂಜೆ ಸಲ್ಲಿಸಿದ್ದರು.
ಆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಇಂದು ಬೆಳಿಗ್ಗೆ ಸುಕ್ಷೇತ್ರಕ್ಕೆ ಭೇಟಿ ನೀಡಿ, ಸ್ವಾಮಿ ಸನ್ನಿಧಿಯಲ್ಲಿ ದೀರ್ಘದಂಡ ನಮಸ್ಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬೆಳ್ಳಿ ಹೆಲಿಕಾಪ್ಟರ್ ಮಾದರಿಯನ್ನು ಸ್ವಾಮಿಗೆ ಅರ್ಪಿಸಿದರು.
‘ಮಾಹಿತಿ ಕೊರತೆಯಿಂದ ಈ ಹಿಂದೆ ಸುಕ್ಷೇತ್ರಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದು ಹೋಗಿದ್ದೆ. ಸುಕ್ಷೇತ್ರದ ಧಾರ್ಮಿಕ ಪರಂಪರೆಗೆ ಅಪಚಾರವಾಗಿದೆ ಎಂದು ನಂತರ ತಿಳಿಯಿತು. ನಮ್ಮ ಕಾರ್ಯಕರ್ತರು, ಮುಖಂಡರು ದೋಷ ಪರಿಹಾರವಾಗಿ ಈಗಾಗಲೇ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕರ್ತರ ಅಭಿಲಾಷೆಯಂತೆ ಸ್ವಾಮಿಯಲ್ಲಿ ಕ್ಷಮಾ ಕೋರಿ ಪೂಜೆ ಸಲ್ಲಿಸಿದ್ದೇನೆ. ನನ್ನ ಕಾರ್ಯಕರ್ತರೊಬ್ಬರು ಸ್ವಾಮಿಗೆ ಬೆಳ್ಳಿ ಹೆಲಿಕಾಪ್ಟರ್ ಅರ್ಪಿಸಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…