ಮೈಸೂರಿನಲ್ಲಿ ಟಿಪ್ಪು ಮೂರ್ತಿ ಸ್ಥಾಪಿಸಿದರೆ, ಬಾಬರಿ ಮಸೀದಿಯಂತೆಯೇ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್ – Vishwanews24

Featured, ರಾಜ್ಯ ನ್ಯೂಸ್

ಮೈಸೂರಿನಲ್ಲಿ ಟಿಪ್ಪು ಮೂರ್ತಿ ಸ್ಥಾಪಿಸಿದರೆ, ಬಾಬರಿ ಮಸೀದಿಯಂತೆಯೇ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ‘ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು’ ಎಂದು ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ.

ನಗರದ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಒಂದು ವೇಳೆ ಮೈಸೂರಿನಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ, ಬಾಬರಿ ಮಸೀದಿಯಂತೆ ಅದನ್ನು ಸಹ ಧ್ವಂಸ ಮಾಡಲಾಗುವುದು” ಎಂದು ಹೇಳಿದರು.

”ಭಾರತ ಮತ್ತು ಪಾಕಿಸ್ತಾನ ಧರ್ಮದ ಆಧಾರದಲ್ಲಿ ಬೇರೆಯಾದ ರಾಷ್ಟ್ರಗಳು, ಪಾಕಿಸ್ತಾನ ಹೇಗೆ ಮುಸ್ಲಿಂರಿಗೆ ಸೀಮಿತವೋ, ಹಾಗೆ ಭಾರತ ಹಿಂದೂ ರಾಷ್ಟ್ರ. ಸಂವಿಧಾನದಲ್ಲಿ ಬಲವಂತವಾಗಿ ಜಾತ್ಯಾತೀತ ಶಬ್ಧ ಸೇರಿಸಲಾಗಿದೆ. ಇದನ್ನು ನಾವು ಒಪ್ಪುವುದಿಲ್ಲ” ಎಂದು ಹೇಳಿದರು.

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ- 25 ಲಕ್ಷ ರೂ. ಪ್ರತಿಭಾ ಪುರಸ್ಕಾರ -ಸನ್ಮಾನ -ಬಹುಮಾನ ವಿತರಣೆ.. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ಕಾಪು ಪಿಲಿಕೋಲ” ದೈವ ನರ್ತಕ ಗುಡ್ಡ ಪಾಣಾರ ರವರಿಗೆ ಸನ್ಮಾನ

Leave a Reply