ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ – vishwanews24
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ
ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್ 11 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ.
ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್ 11ಕ್ಕೆ ದಸರಾ ಉದ್ಘಾಟನೆಗೊಳ್ಳಲಿದೆ. ಅ.21 ರಂದು ವಿಜಯದಸಮಿ ಜಂಬೂಸವಾರಿ ನಡೆಯಲಿದೆ. ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.
ದಸರಾ ಉದ್ಘಾಟಕರನ್ನು ನಿರ್ಣಯಿಸುವ ಅಧಿಕಾರ ಸಿಎಂ ನೀಡುವ ಸಾಧ್ಯತೆ ಇದೆ. ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಕಳೆದ ವರ್ಷ ದಸರಾ ಉದ್ಘಾಟನೆ ಮಾಡಿದ್ದರು.
ರೈಲು ಟಿಕೆಟ್ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24
ದಿನಾಂಕಗಳ ವಿವರ:
ಈ ವರ್ಷದ ದಸರಾ ಮಹೋತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 21 ರವರೆಗೆ ಜರುಗಲಿದೆ.
ಅಕ್ಟೋಬರ್ 11: ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಉದ್ಘಾಟಕರನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಕ್ಟೋಬರ್ 18: ಮಹಾ ನವಮಿ / ದುರ್ಗಾಷ್ಟಮಿ ಪೂಜೆಗಳು ನಡೆಯಲಿವೆ.
ಅಕ್ಟೋಬರ್ 19: ಆಯುಧ ಪೂಜೆ ಸಂಭ್ರಮ.
ಅಕ್ಟೋಬರ್ 21: ದಸರಾದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಅಥವಾ ಜಂಬೂ ಸವಾರಿ ನಡೆಯಲಿದೆ.
ಅಂದು ಮಧ್ಯಾಹ್ನ 4:10ಕ್ಕೆ ಶುಭ ‘ಮೀನಾ ಲಗ್ನ’ದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ನಂತರ ಚಿನ್ನದ ಅಂಬಾರಿಯಲ್ಲಿ ವಿರಾಜಮಾನನಾಗಲಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಾಗುವುದು.
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ – vishwanews24
ಜುಲೈ 26ರಿಂದಲೇ ಗಜಪಯಣ ಆರಂಭ:
ದಸರಾ ಆನೆಗಳ ಆಗಮನ ಅಥವಾ ‘ಗಜಪಯಣ’ಕ್ಕೆ ಜುಲೈ 26 ರಂದು ಚಾಲನೆ ನೀಡಲು ನಿರ್ಧರಿಸಲಾಗಿದೆ. ಕಾಡಿನಿಂದ ನಾಡಿಗೆ ಬರುವ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರುವ ಮೂಲಕ ದಸರಾ ಚಟುವಟಿಕೆಗಳು ಅಧಿಕೃತವಾಗಿ ಮೈಸೂರಿನಲ್ಲಿ ಕಳೆಗಟ್ಟಲಿವೆ.
