Featured

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್‌ 11 ರಂದು ಚಾಮುಂಡಿ ಬೆಟ್ಟದಲ್ಲಿ  ದಸರಾ ಉದ್ಘಾಟನೆಯಾಗಲಿದೆ.

ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್‌ 11ಕ್ಕೆ ದಸರಾ ಉದ್ಘಾಟನೆಗೊಳ್ಳಲಿದೆ. ಅ.21 ರಂದು ವಿಜಯದಸಮಿ ಜಂಬೂಸವಾರಿ ನಡೆಯಲಿದೆ. ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.

ದಸರಾ ಉದ್ಘಾಟಕರನ್ನು ನಿರ್ಣಯಿಸುವ ಅಧಿಕಾರ ಸಿಎಂ ನೀಡುವ ಸಾಧ್ಯತೆ ಇದೆ. ಬುಕರ್‌ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್‌ ಅವರು ಕಳೆದ ವರ್ಷ ದಸರಾ ಉದ್ಘಾಟನೆ ಮಾಡಿದ್ದರು.

ದಿನಾಂಕಗಳ ವಿವರ:
ಈ ವರ್ಷದ ದಸರಾ ಮಹೋತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 21 ರವರೆಗೆ ಜರುಗಲಿದೆ.
ಅಕ್ಟೋಬರ್ 11: ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಉದ್ಘಾಟಕರನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಕ್ಟೋಬರ್ 18: ಮಹಾ ನವಮಿ / ದುರ್ಗಾಷ್ಟಮಿ ಪೂಜೆಗಳು ನಡೆಯಲಿವೆ.
ಅಕ್ಟೋಬರ್ 19: ಆಯುಧ ಪೂಜೆ ಸಂಭ್ರಮ.
ಅಕ್ಟೋಬರ್ 21: ದಸರಾದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಅಥವಾ ಜಂಬೂ ಸವಾರಿ ನಡೆಯಲಿದೆ.

ಅಂದು ಮಧ್ಯಾಹ್ನ 4:10ಕ್ಕೆ ಶುಭ ‘ಮೀನಾ ಲಗ್ನ’ದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ನಂತರ ಚಿನ್ನದ ಅಂಬಾರಿಯಲ್ಲಿ ವಿರಾಜಮಾನನಾಗಲಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಾಗುವುದು.

ಜುಲೈ 26ರಿಂದಲೇ ಗಜಪಯಣ ಆರಂಭ:
ದಸರಾ ಆನೆಗಳ ಆಗಮನ ಅಥವಾ ‘ಗಜಪಯಣ’ಕ್ಕೆ ಜುಲೈ 26 ರಂದು ಚಾಲನೆ ನೀಡಲು ನಿರ್ಧರಿಸಲಾಗಿದೆ. ಕಾಡಿನಿಂದ ನಾಡಿಗೆ ಬರುವ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರುವ ಮೂಲಕ ದಸರಾ ಚಟುವಟಿಕೆಗಳು ಅಧಿಕೃತವಾಗಿ ಮೈಸೂರಿನಲ್ಲಿ ಕಳೆಗಟ್ಟಲಿವೆ.

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

3 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

3 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

4 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

4 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

5 hours ago

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…

5 hours ago