ಮೈಸೂರು : ಅನ್ಯ ಜಾತಿಯ ಯುವಕನೊಂದಿಗೆ ಪ್ರೀತಿ –  ಅಪ್ರಾಪ್ತ ಮಗಳನ್ನೆ ಕೊಂದ ತಂದೆ ತಾಯಿ  – Vishwanews24

Featured, ರಾಜ್ಯ ನ್ಯೂಸ್

ಮೈಸೂರು : ಅನ್ಯ ಜಾತಿಯ ಯುವಕನೊಂದಿಗೆ ಪ್ರೀತಿ –  ಅಪ್ರಾಪ್ತ ಮಗಳನ್ನೆ ಕೊಂದ ತಂದೆತಾಯಿ 

ಮೈಸೂರು :  ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಅಪ್ರಾಪ್ತ ಮಗಳನ್ನು ತಂದೆ ತಾಯಿ ಸೇರಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17) ಕೊಲೆಗೀಡಾದ ಬಾಲಕಿ. ಈಕೆ ಮೆಲ್ಲಹಳ್ಳಿಯ ಯುವಕ ಮಂಜು ಅನ್ನು ಪ್ರೀತಿಸುತ್ತಿದ್ದಳು. ಶಾಲಿನಿ ಮನೆಯಲ್ಲಿ ಪ್ರೀತಿಗೆ ವಿರೋಧವಿತ್ತು, ಈ ಹಿನ್ನಲೆ ಶಾಲಿನಿ ಮಂಜು ಅನ್ನು ಮದುವೆಯಾಗಲು ಮನೆ ಬಿಟ್ಟಿದ್ದಳು, ಆದರೆ ಇದೇ ವಿಚಾರ ಪೊಲೀಸ್ ಠಾಣೆ ಮೆಟ್ಟಲೇರಿತ್ತು. ಪೊಲೀಸರ ಮುಂದೆ ಶಾಲಿನಿ ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಹೀಗಾಗಿ ಶಾಲಿನಿ ಬಾಲಮಂದಿರಕ್ಕೆ ಸೇರಿಕೊಂಡಿದ್ದಳು.

ಇತ್ತೀಚೆಗಷ್ಟೆ ಮಗಳನ್ನು ಪೋಷಕರಾದ ಸುರೇಶ್ ಹಾಗೂ ಬೇಬಿ ಮನೆಗೆ ಕರೆ ತಂದು ಮಗಳನ್ನು ಕೊಲೆ ಮಾಡಿದ್ದಾರೆ. ಶಾಲಿನಿ ಮೃತದೇಹ ಜಮೀನೊಂದರಲ್ಲಿ ಪತ್ತೆಯಾಗಿದೆ. ತಮಗೆ ಅವಮಾನ ಮಾಡಿದಕ್ಕೆ ಮಗಳನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾನೊಬ್ಬ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ , ರಾಜಕೀಯ ಶಾಶ್ವತವಲ್ಲ : ಡಿಕೆ ಶಿ – Vishwnaews24

Leave a Reply