Featured

ಮೈಸೂರು : ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ : ಪ್ರಧಾನಿ – Vishwanews24

ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ : ಪ್ರಧಾನಿ

ಮೈಸೂರು: ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.

ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು ಅಭ್ಯಾಸ ಮಾಡಲಾಗುತ್ತಿದೆ. ಯೋಗವು ನಮಗೆ ಶಾಂತಿಯನ್ನು ತರುತ್ತದೆ. ಕೇವಲ ನಮಗೆ ಮಾತ್ರವಲ್ಲ ಯೋವು ನಮ್ಮ ರಾಷ್ಟ್ರ ಸೇರಿದಂತೆ ಇಡೀ ಜಗತ್ತಿಗೆ ಶಾಂತಿಯನ್ನು ತರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಇಡೀ ವಿಶ್ವವು ನಮ್ಮ ದೇಹ ಮತ್ತು ಆತ್ಮದಿಂದ ಆರಂಭವಾಗುತ್ತದೆ. ವಿಶ್ವವು ನಮ್ಮಿಂದ ಪ್ರಾರಂಭವಾಗುತ್ತದೆ ಮತ್ತು ಯೋಗವು ನಮ್ಮೊಳಗಿನ ಎಲ್ಲವನ್ನೂ ಜಾಗೃತಗೊಳಿಸುತ್ತದೆ ಮತ್ತು ಅರಿವಿನ ಪ್ರಜ್ಞೆಯನ್ನು ನಿರ್ಮಿಸುತ್ತದೆ ಎಂದರು.

 

ಕೆಲವು ವರ್ಷಗಳ ಹಿಂದೆ ಯೋಗ ಮನೆಯೊಳಗೆ, ಆಧ್ಯಾತ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿತ್ತು. ಈಗ ದೇಶದ ಮೂಲೆ ಮೂಲೆಗಳಲ್ಲಿ ಯೋಗ ನಡೆಯುತ್ತಿದೆ. ಇದು ವ್ಯಕ್ತಿಗಾಗಿ ಯೋಗವಲ್ಲ. ಮನು ಕುಲದ ಒಳಿತಿಗಾಗಿ ಯೋಗ. ಈ ಕಾರಣಕ್ಕೆ ಈ ಬಾರಿ ಮಾನವೀಯತೆಗಾಗಿ ಯೋಗ ಮಾಡುತ್ತಿದ್ದೇವೆ. ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ಯೋಗಕ್ಕೆ ಇದೆ. ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಮಾನಸಿಕ ಶಾಂತಿ, ಸದೃಢತೆಗೆ ಪ್ರತಿಯೊಬ್ಬರು ಯೋಗ ಮಾಡಬೇಕು. ಯೋಗಕ್ಕೆ ಇರುವ ಶಕ್ತಿಯನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಸಲಹೆ ನೀಡಿದರು.

ಸೂರ್ಯೋದಯ ಸಮಯಕ್ಕೆ ಇಡೀ ವಿಶ್ವದಲ್ಲಿ ಯೋಗ ಮಾಡಲಾಗುತ್ತಿದೆ. ಇಂದು ಯೂನಿವರ್ಸಲ್ ಯೋಗ ಚೈನ್ ಸೃಷ್ಟಿಯಾಗಲಿದೆ. ಒಂದೆರಡು ನಿಮಿಷದ ಧಾನ್ಯ ನಮ್ಮ ಮನಸ್ಸಿಗೆ ಶಕ್ತಿ ತುಂಬುತ್ತದೆ. ನಾವು ಯೋಗವನ್ನು ಬದುಕಿನ ಬಹು ದೊಡ್ಡ ಭಾಗವಾಗಿ ಸ್ವೀಕರಿಸಬೇಕು. ಯೋಗದ ಬಗ್ಗೆ ತಿಳಿದುಕೊಂಡು ಯೋಗದ ಜೊತೆಗೆ ಬದುಕುವುದ ಕಲಿಯಬೇಕು ಎಂದರು.

2014ರ ಸೆಪ್ಟೆಂಬರ್ 27ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನದ ಕಲ್ಪನೆಯನ್ನು ಮೊದಲ ಬಾರಿಗೆ ಮುಂದಿಟ್ಟರು. ಭಾರತವು ಅಂಗೀಕರಿಸಿದ ಕರಡು ನಿರ್ಣಯವನ್ನು 177 ರಾಷ್ಟ್ರಗಳು ಬೆಂಬಲಿಸಿದವು. ಯೋಗದ ಸಾರ್ವತ್ರಿಕ ಮನ್ನಣೆ ಮತ್ತು ಹೆಚ್ಚುತ್ತಿರುವ ಜನಪ್ರಿಯತೆಯೊಂದಿಗೆ, ವಿಶ್ವಸಂಸ್ಥೆಯು ಜೂನ್ 21 ಅನ್ನು 2014ರ ಡಿಸೆಂಬರ್ 11 ರಂದು ಅಂತಾರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago