ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿರುವುದು ಪೋಷಕರಲ್ಲಿ ಆಂತಕ ಉಂಟು ಮಾಡಿದೆ.
ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೂಲದವರಾಗಿದ್ದು, ಸದ್ಯ ಮೈಸೂರಿನಲ್ಲಿ ತಮ್ಮ ಅಕ್ಕನ ಜೊತೆ ವಾಸವಿದ್ದುಕೊಂಡು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್ನಲ್ಲಿ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೊಳಗಾಗಿ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ.
ಇದನ್ನೂ ಓದಿ:
ವಿದ್ಯಾರ್ಥಿ ಕುಸಿದುಬೀಳುತ್ತಿದ್ದಂತೆ ಗಾಬರಿಗೊಂಡ ಕಾಲೇಜಿನ ಸಿಬ್ಬಂದಿ ಹಾಗೂ ಸಹಪಾಠಿಗಳು ತಕ್ಷಣವೇ ಕಾಲೇಜು ಮಂಡಳಿಯ ಸಿಬ್ಬಂದಿ ಮಾದೇಶ್ ಅನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಪರೀಕ್ಷೆ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮಾದೇಶ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸಣ್ಣ ವಯಸ್ಸಿನಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವುದು ಕಾಲೇಜು ಹಾಗೂ ಮೃತನ ಕುಟುಂಬದಲ್ಲಿ ನೋವು ಉಂಟು ಮಾಡಿದೆ.
ಕಾಲೇಜು ದಿನಗಳಲ್ಲೇ ಮಗನನ್ನು ಕಳೆದುಕೊಂಡ ಹೆತ್ತವರ ಹಾಗೂ ಅಕ್ಕನ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ:
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…