ಮೈಸೂರು: ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಸಾವನಪ್ಪಿದ ಘಟನೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರಗೆ ರವಾನಿಸಲು ಸಿದ್ಧತೆ ಮಾಡಲಾಗುತ್ತಿದೆ. ಸದ್ಯ ಚಾಮರಾಜನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…