ಮೈಸೂರು: ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.
ನ. ೧೩ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು,ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ ಎಂದು ಹೇಳಿದ್ದಾರೆ.
ಮೈಸೂರಿನ ಊಟಿ ರಸ್ತೆಯ ಬಸ್ ನಿಲ್ದಾಣದ ಮೇಲೆ ಗುಂಬಜ್‍ಗಳು ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಅಕ್ಕ ಪಕ್ಕ ಚಿಕ್ಕ ಗುಂಬಜ್‍ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್‌ಗಳಿಗೆ ಹೇಳಿದ್ದೇನೆ. ಮೂರು, ನಾಲ್ಕು ದಿನ ಟೈಮ್ ಕೊಟ್ಟಿದ್ದೇನೆ. ಇಲ್ಲವಾದ್ರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ತಿಳಿಸಿದರು.
ಬಸ್ ತಂಗುದಾಣದ ಮೇಲೆ ಗುಂಬಜ್ ಇರುವುದು ಗಮನಿಸಿದ್ದು. ಅಂತಹ ಬಸ್ ನಿಲ್ದಾಣದ ಗುಂಬಜ್ ತೆರವಿಗೆ ಹೇಳಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್
ಗುಂಬಜ್ ಮಾದರಿ ಬಸ್ ಶೆಲ್ಟರ್ ಒಡೆದು ಹಾಕುವ ಎಚ್ಚರಿಕೆ ನೀಡಿದ್ದ ಸಂಸದ ಪ್ರತಾಪಸಿಂಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಬಸ್ ಶೆಲ್ಟರ್ ಬದಲಾಗಿದೆ. ಇದೀಗ ಬಸ್ ಶೆಲ್ಟರ್ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ. ಶಾಸಕ ಎಸ್ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಸ್ ನಿಲ್ದಾಣದ ಶೆಲ್ಟರ್ನಲ್ಲಿ ಮೂರು ಗುಂಬಜ್‌ಗಳ ಮೇಲೆ ಕಳಸ ಮಾದರಿಯ ಆಕೃತಿ ನಿರ್ಮಾಣ ಮಾಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…