Featured

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬಾಲಾಪರಾಧಿ ಸೇರಿದಂತೆ ಐವರ ಬಂಧನ -Vishwanews24

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬಾಲಾಪರಾಧಿ ಸೇರಿದಂತೆ ಐವರ ಬಂಧನ -Vishwanews24

ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ವಿದ್ಯಾರ್ಥಿನಿ ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು, ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದಾರೆ. ಇದರಲ್ಲಿ ಒಬ್ಬ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು ಎಂದಿದ್ದಾರೆ.

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್, ಕಾರ್ಪೆಂಟರ್ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ ಎಂದು ಹೇಳಿದ್ದಾರೆ.

ಇದರಲ್ಲಿ ಓರ್ವ ಬಾಲಾಪರಾಧಿ ಇದ್ದರೂ ಈ ಹಿಂದಿನ ಪ್ರಕರಣಗಳಂತೆ ಆಗುವುದಿಲ್ಲ. ಏಕೆಂದರೆ, ಬಾಲಕಾಯ್ದೆಯಲ್ಲೂ ಬದಲಾಗಿದೆ. ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ನ್ಯಾಯಾಲಯದಲ್ಲಿ ವಿಚಾರಣೆ ಆಗಲಿದೆ. 6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದಾನೆ. ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ಆರೋಪಿಗಳನ್ನು ಬಂಧಿಸಿದ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸುವೆ. ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago