ಮೈಸೂರು : ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು -Vishwanews24

ಮೈಸೂರು:ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.

ಸುಮಾರು 400 ವರ್ಷಗಳ ಹಿಂದೆ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ಇದು ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರಬಿಂದು. ಆದರೆ, ವಿಗ್ರಹದ ಕಾಲು, ಕುತ್ತಿಗೆ, ಮುಖದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಅಂದಹಾಗೆ, ಈ ಬಿರುಕು ಕಾಣಿಸಿಕೊಳ್ಳಲು ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇತ್ತೀಚೆಗೆ ನಂದಿ ವಿಗ್ರಹವನ್ನು ಪಾಲಿಷ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದೆ. ಕೆಲವು ಕಡೆ ಬಿರುಕು ಬಿಟ್ಟಿರುವ ರೀತಿ ಮೇಲ್ನೋಟಕ್ಕೆ ಕಾಣುತ್ತಿದೆ. ಆದರೆ ಅದು ಬಿರುಕಲ್ಲ, ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿ ವರದಿ ನೀಡಲಿದ್ದು, ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ಅದನ್ನು ಮುಚ್ಚಲು ಕೂಡ ಜಿಲ್ಲಾಡಳಿತ ಮುಂದಾಗಲಿದೆ. 1659ರಲ್ಲಿ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ವಿಗ್ರಹ 25 ಅಡಿ ಉದ್ದ ಇದೆ. ಈ ನಂದಿ ಚಾಮುಂಡಿ ಬೆಟ್ಟದ ಪ್ರಮುಖ ಆಕರ್ಷಣೆಯಾಗಿದೆ.

ನಂದಿಗೆ ಎಣ್ಣೆ ಮತ್ತಿತ್ಯಾದಿ ಅಂಶಗಳು ತಾಗಿ ಕಪ್ಪಾಗಿತ್ತು. ಹೀಗಾಗಿ ರಾಸಾಯನಿಕ ಬಳಕೆ ಮಾಡಿ ನಂದಿ ವಿಗ್ರಹವನ್ನು ಪಾಲಿಷ್​ ಮಾಡಲಾಗಿತ್ತು. ಈ ವೇಳೆ ನಂದಿ ವಿಗ್ರಹ ಬಿಳಿ ಬಣ್ಣಕ್ಕೆ ತಿರುಗಿತ್ತು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

22 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

22 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

22 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

22 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

22 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

22 hours ago