ಮೈಸೂರು: ‘ಜಿಲ್ಲೆಯಲ್ಲಿನ ಭೂ ಮಾಫಿಯಾ ವಿಚಾರವಾಗಿ ಜಿಲ್ಲಾಧಿಕಾರಿ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ತನಿಖೆಗೆ ನಾವು ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಾದೇಶಿಕ ಆಯುಕ್ತರಿಗೂ ಕೆಲವರು ದೂರು ನೀಡಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಹಿಂದಿನ ಜಿಲ್ಲಾಧಿಕಾರಿ ಕೈಗೆತ್ತಿಗೊಂಡಿರುವ ತನಿಖೆಗಳನ್ನು ಈಗಿನ ಜಿಲ್ಲಾಧಿಕಾರಿ ಮುಂದುವರಿಸಲಿದ್ದಾರೆ’ ಎಂದರು.
ರೋಹಿಣಿ ಸಿಂಧೂರಿ ಅವರನ್ನೇ ತನಿಖಾಧಿಕಾರಿಯಾಗಿ ನೇಮಿಸಿಬೇಕೆಂದು ಎಚ್.ವಿಶ್ವನಾಥ್ ನೀಡಿರುವ ಸಲಹೆ ಕುರಿತು, ‘ಸಿಂಧೂರಿ ಅವರನ್ನೇ ನೇಮಿಸಲಿ, ಅದು ಸಂತೋಷದ ವಿಚಾರ. ವಿಶ್ವನಾಥ್ ಹಿರಿಯ ನಾಯಕ. ಅವರ ಸಲಹೆ ಸ್ವೀಕಾರವಾಗುವಂಥದ್ದು’ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…