ಮೈಸೂರು : ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದ ದೃಷ್ಟಿಯಿಂದ ಜೂ. 14 ರಿಂದ 21ರ ವರೆಗೆ ಲಾಕ್ಡೌನ್ ಮುಂದುವರಿಕೆ ಮಾಡಲಾಗುವುದು ಎಂದು ಮೈಸೂರಿನಲ್ಲಿ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜೂನ್ 14ರ ನಂತರವೂ ಮೈಸೂರಿನಲ್ಲಿ ಲಾಕ್ಡೌನ್ ಮುಂದುವರಿಯಲಿದೆ. ಆದರೆ ಯಾವುದಕ್ಕೆ ವಿನಾಯಿತಿ ಕೊಡಬೇಕು ಎಂಬುದರ ಕುರಿತು ಚರ್ಚಿಸಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಲಿದ್ದಾರೆ.
ಅನ್ ಲಾಕ್ ಮಾಡಬೇಕಿದ್ರೆ ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕು ಅನ್ನುವ ನಿಯಮ ಇದೆ. ಮೈಸೂರಿನಲ್ಲಿ ಈಗ ಶೇ.13 ರಷ್ಟು ಪಾಸಿಟಿವಿಟಿ ರೇಟ್ ಇದೆ. ಇದನ್ನು ಅತೀ ಶೀಘ್ರದಲ್ಲಿ ಶೇ.5 ಕ್ಕಿಳಿಸುವ ನಿಟ್ಟಿನಲ್ಲಿ ಪ್ರಯತ್ನಗಳಾಗ ಬೇಕಿದೆ.
ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಹಾಗೂ ಎಸ್ಪಿ ಒಂದೇ ಕಾರಿನಲ್ಲಿ ಕ್ಷೇತ್ರ ಸಂಚಾರ ಮಾಡಲಿದ್ದಾರೆ.
ಮೈಸೂರಿನ ಎಲ್ಲಾ 11ಕ್ಷೇತ್ರಗಳಿಗೂ ಒಟ್ಟಿಗೆ ಭೇಟಿಕೊಟ್ಟು ಕೋವಿಡ್ ಪರಿಸ್ಥಿತಿ ತಹಬದಿಗೆ ತರಲಿದ್ದಾರೆ ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…