ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಮೃತರನ್ನು ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಹಾಗೂ ಶ್ರೀನಗರದ ನಿವಾಸಿ ಲತಾ (48) ಎಂದು ಗುರುತಿಸಲಾಗಿದೆ. ಕೊಲೆಗಾರ ಸಾಗರ್ ತಲೆಮರೆಸಿಕೊಂಡಿದ್ದಾನೆ.
ಕಳೆದ ಹಲವು ದಿನಗಳಿಂದ ಶಿವಪ್ರಕಾಶ್ ಲತಾ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಇದಕ್ಕೆ ಪುತ್ರನಿಂದ ಆಕ್ಷೇಪವೂ ವ್ಯಕ್ತವಾಗಿತ್ತು. ಈ ಸಂಬಂಧ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ನಡುವೆ ಲತಾ ಮನೆಗೆ ನುಗ್ಗಿದ್ದ ಸಾಗರ್ ಮೊದಲು ತಂದೆಯನ್ನು ಕೊಲೆ ಮಾಡಿ ಬಳಿಕ ಲತಾಳನ್ನು ಮಚ್ಚಿನೇಟಿನಿಂದ ಸಾಯಿಸಿದ್ದಾನೆ.
ಈ ನಡುವೆ ಲತಾ ಮೇಲೆ ಹಲ್ಲೆಗೆ ಮುಂದಾದ ವೇಳೆ ಲತಾ ಪುತ್ರ ನಾಗಾರ್ಜುನ ಅಡ್ಡ ಬಂದಿದ್ದು ಅವನಿಗೂ ಮಚ್ಚಿನಿಂದ ಹಲ್ಲೆ ಮಾಡಿರುವ ಸಾಗರ್ ಪರಾರಿಯಾಗಿದ್ದಾನೆ. ಗಾಯಗೊಂಡಿರುವ ನಾಗಾರ್ಜುನನನ್ನು ಆಸ್ಪತ್ರೆ ದಾಖಲಿಸಲಾಗಿದ್ದು, ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಸಾಗರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…