ಮೈಸೂರು ದಸರಾ ಉದ್ಘಾಟಿಸಿದ ಲೇಖಕಿ ಸುಧಾಮೂರ್ತಿ

Featured, ಜಿಲ್ಲೆ

ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಮತ್ತು ಲೇಖಕಿ ಸುಧಾಮೂರ್ತಿ ಅವರು ಇಂದು ಬೆಳಗ್ಗೆ ಚಾಲನೆ ನೀಡಿದರು.

ಚಾಮುಂಡಿ ದೇವಿಯ ಉತ್ಸಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಸುಧಾಮೂರ್ತಿ ಅವರು ಇನ್ ಫೋಸಿಸ್ ಸಂಸ್ಥಾಪಕ ಎನ್. ಆರ್. ನಾರಾಯಣಮೂರ್ತಿ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.

ಇದರ ಬಳಿಕ ಸುಧಾಮೂರ್ತಿ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು.